ಬೆಂಗಳೂರು: ಹೆದ್ದಾರಿಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಸದಸ್ಯರನ್ನು ನಂದಗುಡಿ ಪೊಲೀಸರು ಬಂಧಿಸಿದ್ದಾರೆ.ಮಂಜೇಶ್ (24), ಆಫ್ರಿದ್ ಖಾನ್ (22), ಬಾಬು (21) ಮತ್ತು ಸಂತೋಷ್ (21), ಬಂಧಿತ ಆರೋಪಿಗಳು. ಆರೋಪಿಗಳು ಬೆಳಗಿನ ಜಾವ ಸುಮಾರು 4 ಗಂಟೆಗೆ ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದರು. ಮೊದಲಿಗೆ ಹಾಕಿ ಸ್ಟಿಕ್ ಹಿಡಿದು ವಾಹನಗಳನ್ನು ಅಡ್ಡ ಹಾಕುತ್ತಿದ್ದರು. ಬಳಿಕ ಜನರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದರು.ಇಂದು ಕೋಲಾರ ರಸ್ತೆ ತಾವರೆಕೆರೆ ಫ್ಲೈ ಓವರ್ ಬಳಿ ವಾಹನಗಳನ್ನ ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ರಾಷ್ಟ್ರೀಯ ಹೆದ್ದಾರಿ ಪೆಟ್ರೋಲ್ ಸಿಬ್ಬಂದಿ ಆರೋಪಿಗಳನ್ನು ಸುತ್ತುವರಿದಿದ್ದರು. ಈ ವೇಳೆ ಆರೋಪಿಗಳು ಅವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.ಈ ವೇಳೆ ಮಾಹಿತಿ ತಿಳಿದು ನಂದಗುಡಿ ಪಿಎಸ್‍ಐ ಲಕ್ಷ್ಮೀನಾರಾಯಣ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಆಟೋ, ಸುತ್ತಿಗೆ, ಹಾಕಿ ಸ್ಟಿಕ್, ಮಾಸ್ಕ್, ಒಂದು ಕೆಜಿಯಷ್ಟು ಖಾರದ ಪುಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಮೊದಲು ಹಲವಾರು ರಾಷ್ಟ್ರೀಯ ಹೆದ್ದಾರಿಯ ರಾಬರಿಗಳಲ್ಲಿ ಈ ಗ್ಯಾಂಗ್ ಭಾಗಿಯಾಗಿತ್ತು. ನಂದಗುಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


