ಬೆಳಗಾವಿ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊ0ಡಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಎಪಿಎಂಸಿ ಶೌಚಾಲಯದಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ ಶಿವಕುಮಾರ್ ಉಪ್ಪಾರ(19) ಆತ್ಮಹತ್ಯೆಗೆ ಶರಣಾದ ಯುವಕ. ಶನಿವಾರ ರಾತ್ರಿಯೇ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. ಸದ್ಯಕ್ಕೆ ಮಾಹಿತಿ ತಿಳಿದು ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಘಟನೆ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯಕ್ಕೆ ಯುವಕನ  ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.Sign in to your account
Username or Email Address


Password

 Remember Me


