ಸುರೇಶ್ ಶೃಂಗೇರಿ ನಿರ್ದೇಶನ ಮಾಡಿರುವ ವೀಕೆಂಡ್ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಮಿಲಿಂದ್ ಮತ್ತು ಸಂಜನಾ ಬುರ್ಲಿ ನಾಯಕ ನಾಯಕಿಯರಾಗಿ ನಟಿಸುತ್ತಿರೋ ಈ ಚಿತ್ರದಲ್ಲಿ ಅನಂತ್ ನಾಗ್ ಪ್ರಧಾನ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಈ ಸಿನಿಮಾ ಬಗ್ಗೆ ಈ ಪಾಟಿ ಕ್ರೇಜ್ ಹುಟ್ಟಿಕೊಂಡಿರೋದರ ಹಿಂದೆ ಅನಂತ್ ಪಾತ್ರದ ವೈಶಿಷ್ಟ್ಯವೂ ಸೇರಿಕೊಂಡಿದೆ.ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರಿನಡಿಯಲ್ಲಿ ಮಂಜುನಾಥ್ ಡಿ ಅವರು ನಿರ್ಮಾಣ ಮಾಡಿರೋ ಚಿತ್ರ ವೀಕೆಂಡ್. ಇದೊಂದು ಯುವ ಆವೇಗವನ್ನು ಒಳಗೊಂಡಿರುವ, ಈ ಮೂಲಕವೇ ಸಾಮಾಜಿಕ ಕಾಳಜಿಯನ್ನೂ ಕೂಡಾ ಪ್ರಚುರಪಡಿಸೋ ಪಕ್ಕಾ ಕಮರ್ಶಿಯಲ್ ಚಿತ್ರ. ಹೊಸ ತಂತ್ರಜ್ಞಾನ, ಹೊಸ ಬಗೆಯ ನಿರೂಪಣೆಯೊಂದಿಗೆ ವೀಕೆಂಡ್ ಬೇರೆಯದ್ದೇ ರೀತಿಯಲ್ಲಿ ಪ್ರೇಕ್ಷಕರಿಗೆಲ್ಲ ಮಜಾ ಕೊಡುವಂತೆ ಮೂಡಿ ಬಂದಿದೆಯಂತೆ.ಇಲ್ಲಿ ಸಾಫ್ಟ್‍ವೇರ್ ಉದ್ಯೋಗಿಗಳ ಜಗತ್ತನ್ನು ಕಣ್ಣಿಗೆ ಕಟ್ಟಿದಂತೆ ಅನಾವರಣಗೊಳಿಸಲಾಗಿದೆಯಂತೆ. ಹೇಳಿ ಕೇಳಿ ಐಟಿ ವಲಯದ ಮಂದಿಗೆ ಈ ವೀಕೆಂಡ್ ಮೋಜು ಮಸ್ತಿ ಅನ್ನೋದು ಫೇವರಿಟ್ ಅಂಶ. ಆದರೆ ಅಳತೆ ಮೀರಿದರೆ ವೀಕೆಂಡ್ ಮಸ್ತಿ ಎಂಬುದು ಭೀಕರ ಅನಾಹುತಗಳಿಗೂ ಕಾರಣವಾಗಿ ಬಿಡುತ್ತದೆ. ಅಂಥಾ ಅಂಶಗಳನ್ನು ಫ್ಯಾಮಿಲಿ ಸೆಂಟಿಮೆಂಟಿನ ಸುತ್ತ ಬೆಸೆದು ರೋಚಕವಾದ ಕಥೆಯ ಮೂಲಕ ಈ ಚಿತ್ರವನ್ನು ಅಣಿಗೊಳಿಸಲಾಗಿದೆ.ಈ ಚಿತ್ರದಲ್ಲಿ ಅನಂತ್ ನಾಗ್ ನಾಯಕನ ತಾತನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅವರದ್ದು ಯುವ ಸಮೂಹವನ್ನು ಸರಿ ದಾರಿಗೆ ತರುವ, ತನ್ನ ಮೊಮ್ಮಗನನ್ನು ಎಲ್ಲ ಎಡವಟ್ಟುಗಳಿಂದ ಪಾರುಗಾಣಿಸೋ ಪಾತ್ರ. ಮಿಲಿಂದ್ ಮತ್ತು ಸಂಜನಾ ಬುರ್ಲಿ ಈ ಚಿತ್ರದಲ್ಲಿ ನಾಯಕ ನಾಯಕಿಯರಾಗಿ ನಟಿಸಿದ್ದಾರೆ.






 Advertisement 




Sign in to your account
Username or Email Address


Password

 Remember Me


