ಮಂಡ್ಯ: ಲೋಕಸಭಾ ಚುನಾವಣೆ ಫಲಿತಾಂಶ ಇಂದು ಹೊರಬರಲಿದೆ. ಮಂಡ್ಯದ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅವರು ಇಂದು ಚಾಮುಂಡೇಶ್ವರಿ ಮೊರೆ ಹೋಗಲಿದ್ದಾರೆ.ಸುಮಲತಾ ಅಂಬರೀಶ್ ಅವರು ಇಂದು 10 ಗಂಟೆ ಸುಮಾರಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ತಮ್ಮ ಬೆಂಬಲಿಗರ ಸೂಚನೆ ಮೇರೆಗೆ ಸುಮಲತಾ ಮಂಡ್ಯಕ್ಕೆ ಆಗಮಿಸಲಿದ್ದಾರೆ. ಚುನಾವಣೆಯಲ್ಲಿ ಸುಮಲತಾ ಅವರು ಗೆಲುವು ಖಚಿತವಾದರೆ ನಟರಾದ ಯಶ್ ಮತ್ತು ದರ್ಶನ್ ಕೂಡ ಮಂಡ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ.ಬೆಳ್ಳಂಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿದ್ದು, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಇಂದು ಮುಂಜಾನೆ ಸುಮಾರು 5 ಗಂಟೆಗೆ ನಿಖಿಲ್ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆಯಲ್ಲಿ ಭಾಗಿಯಾಗಿದ್ದರು. ನಿಖಿಲ್ ಅವರಿಗೆ ಸಚಿವರಾದ ಜಿ.ಟಿ.ದೇವೇಗೌಡ, ಪುಟ್ಟರಾಜು ಮತ್ತು ಶಾಸಕ ಸುರೇಶ್ ಗೌಡ ಸಾಥ್ ನೀಡಿದ್ದಾರೆ.Sign in to your account
Username or Email Address


Password

 Remember Me


