ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ನಡೆಯುತ್ತಿದ್ದು, ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಆಗಮಿಸಿದ್ದು, ಕುತೂಹಲ ಮೂಡಿಸಿದೆ.ಹೌದು. ಸುಮಾರು ಎರಡು ತಿಂಗಳ ಮಹಾಭಾರತ ಕುರುಕ್ಷೇತ್ರದ ಫಲಿತಾಂಶ ಬೆಳಗ್ಗೆ 8 ಗಂಟೆಯಿಂದ ಶುರುವಾಗಿದ್ದು, ಜನರ ಚಿತ್ರ ದೇಶದ ಫಲಿತಾಂಶದತ್ತ ನೆಟ್ಟಿದೆ. ಇತ್ತ ರಾಜಕೀಯ ನಾಯಕರುಗಳು ತಮ್ಮ ತಮ್ಮ ರಾಜಕೀಯ ಚಟುವಟಿಕೆಗಳಲ್ಲಿ ಬ್ಯುಸಿಯಾಗಿದ್ದಾರೆ. ಹಾಗೆಯೇ ಯಡಿಯೂರಪ್ಪ ಅವರ ಮನೆಗೆ ರತ್ನಪ್ರಭಾ ಆಗಮಿಸಿದ್ದಾರೆ.ಡಾಲರ್ಸ್ ಕಾಲೋನಿಯಲ್ಲಿರೋ ಬಿಎಸ್‍ವೈ ಮನೆಗೆ ಆಗಮಿಸಿರುವ ರತ್ನಪ್ರಭಾ ಅವರು ರಾಜಕೀಯ ಬೆಳವಣಿಗೆಗಳ ಕುರಿತಂತೆ ಚರ್ಚೆ ನಡೆಸೋ ಸಾಧ್ಯತೆಗಳಿವೆ ಎನ್ನಲಾಗಿದೆ.ಇತ್ತ ಬಿಜೆಪಿ ಕಚೇರಿ ಮುಂಭಾಗ ದೊಡ್ಡ ಎಲ್ ಇಡಿ ಸ್ಕ್ರೀನ್ ಪರದೆಯ ಮೂಲಕ ಚುನಾವಣಾ ಫಲಿತಾಂಶ ವೀಕ್ಷಣೆಗೆ ಸಜ್ಜು ಮಾಡಲಾಗುತ್ತಿದೆ. ಅಲ್ಲದೆ ಸಾಕಷ್ಟು ಕಾರ್ಯಕರ್ತ ರು ಆಗಮಿಸುವ ನಿರೀಕ್ಷೆ ಇರೋದ್ರಿಂದ ಪೊಲೀಸ್ ಭದ್ರತೆ ಒದಗಿಸಲಾಗಿದೆ.Sign in to your account
Username or Email Address


Password

 Remember Me


