ಕೋಲಾರ: ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್‍ನ ಕಿರುಕುಳ ತಡೆದುಕೊಳ್ಳುವ ಶಕ್ತಿ ಸಿಎಂ ಕುಮಾರಸ್ವಾಮಿ ಅವರಲ್ಲಿ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೋಳೂರು ಬಳಿ ಇರುವ ಗಟ್ಟಹಳ್ಳಿ ಆಂಜನಪ್ಪ ಆಶ್ರಮಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಚಿರಾಯುವಾಗಿದ್ದು, ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರವೂ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಒಂದು ವರ್ಷದಲ್ಲಿ ಸಾಕಷ್ಟು ಚುನಾವಣೆಗಳಾಗಿದ್ದು, ಪದೇ ಪದೆ ಚುನಾವಣೆಗೆ ಹೋಗುವುದರಿಂದ ಜನರಿಗೆ ಹೊರೆಯಾಗುತ್ತದೆ ಎಂದು ಸಲಹೆ ನೀಡಿದ ಅವರು, ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಎರಡು ಪಾಲುದಾರ ಪಕ್ಷಗಳನ್ನ ಸಮನ್ವಯ ಮಾಡಬೇಕು. ಆದರೆ ಸಿದ್ದರಾಮಯ್ಯ ಅವರು ನಿರ್ವಹಣೆ ಮಾಡುವುದರಲ್ಲಿ ಜೊತೆಗೆ ಸರಿಯಾಗಿ ಕಾರ್ಯಸೂಚಿಗಳನ್ನ ದಾಖಲಿಸುವಲ್ಲಿ ವಿಫಲರಾಗಿದ್ದಾರೆಂದು ಮತ್ತೊಮ್ಮೆ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ರು.ನಾನು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷನಾಗಿ, ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷದ ಅಧ್ಯಕ್ಷನಾಗಿ, ನನ್ನ ಇತಿಮಿತಿಯೊಳಗೆ ಸರ್ಕಾರದ ಜವಾಬ್ದಾರಿಯನ್ನ ನೆನಪು ಮಾಡುತ್ತಿದ್ದೆನೆಯೇ ಹೊರತು ನನಗೂ ಸಿದ್ದರಾಮಯ್ಯ ಅವರಿಗೆ ವೈಯುಕ್ತಿಕವಾಗಿ ಏನೂ ಇಲ್ಲ ಎಂದು ಹೇಳಿದರು.Sign in to your account
Username or Email Address


Password

 Remember Me


