ಕಾರವಾರ: ಮುರುಡೇಶ್ವರ ಕಡಲತೀರದಲ್ಲಿ ಈಜಲು ಹೋಗಿ ಮುಳುಗುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ.ರತೀಕ್ ರಾಜ್(19), ಅಂಕುಶ್ ಸಿಂಗ್(19) ಹಾಗೂ ರಾಜೀವ್ ಮುಖರ್ಜಿ(18) ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳು. ರತೀಕ್, ಅಂಕುಶ್ ಹಾಗೂ ರಾಜೀವ್ ಮೂವರು ಗೋವಾದ ಬಿಬಿಡಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಕಾಲೇಜಿನ 30 ವಿದ್ಯಾರ್ಥಿಗಳ ಜೊತೆ ಗೋವಾದಿಂದ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದರು.ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಅಲ್ಲಿದ್ದ ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ನೀರಲ್ಲಿ ಈಜಾಡುತ್ತಿದ್ದ ವೇಳೆ ಅಲೆಗಳ ಸೆಳೆತಕ್ಕೆ ಮೂವರು ವಿದ್ಯಾರ್ಥಿಗಳು ಸಿಲುಕಿದ್ದರು. ಇದನ್ನು ಗಮನಿಸಿದ ಕಡಲತೀರದ ಲೈಫ್ ಗಾರ್ಡ್ ಸಿಬ್ಬಂದಿ ಮುಳುಗುತ್ತಿದ್ದವರ ರಕ್ಷಣೆ ಮಾಡಿದ್ದಾರೆ.ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


