ಬೆಂಗಳೂರು: ಬೆಸ್ಕಾಂ ಹಾಗೂ ಪಾಲಿಕೆಯ ನಿರ್ಲಕ್ಷ್ಯಕ್ಕೆ ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.ಲಿಖಿಲ್(14) ಮೃತ ಬಾಲಕ. ಕಳೆದ ಗುರುವಾರ ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ಈ ಘಟನೆ ನಡೆದಿತ್ತು. ವಿದ್ಯುತ್ ಸ್ಪರ್ಶದಿಂದ ಬಾಲಕನ ದೇಹ ಶೇ.40 ರಷ್ಟು ಸುಟ್ಟು ಹೋಗಿತ್ತು. ತಕ್ಷಣ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಸುಮಾರು 6 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬಾಲಕ ಲಿಖಿಲ್ ಅಸುನೀಗಿದ್ದಾನೆ.ನಡೆಡಿದ್ದೇನು?
ಮತ್ತಿಕೆರೆಯ ನಿವಾಸಿ ರಮಾದೇವಿ ಹಾಗೂ ಅಂಬರೀಶ್ ದಂಪತಿಗೆ ಲಿಖಿಲ್ ಓರ್ವ ಪುತ್ರನಾಗಿದ್ದು, 9 ನೇ ತರಗತಿ ಓದುತ್ತಿದ್ದನು. ಗುರುವಾರ ಮನೆಯ ಬಳಿ ಸ್ನೇಹಿತರೊಡನೆ ಕ್ರಿಕೆಟ್ ಆಡುವಾಗ ಕಟ್ಟಡದ ಮೊದಲ ಮಹಡಿಗೆ ಬಾಲ್ ಹೋಗಿತ್ತು. ಈ ವೇಳೆ ಅದನ್ನು ತರಲು ಹೋಗಿದ್ದ ಲಿಖಿತ್, ತಂತಿ ತುಳಿದು ಕೆಳಗೆ ಬಿದ್ದಿದ್ದನು. ತಕ್ಷಣ ಬಾಲಕನನ್ನು ಸ್ಥಳೀಯರು ಹಾಗೂ ಪೋಷಕರು ರಾಮಯ್ಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.ಈ ಹಿಂದೆ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಎಲ್‍ಆರ್ ಬಂಡೆಯಲ್ಲಿ ಆಟವಾಡುತ್ತಿದ್ದ ಬಾಲಕ ವಿಕ್ರಂ, ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು.Sign in to your account
Username or Email Address


Password

 Remember Me


