ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಸುಮಾರು 15ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನೇಬಗೇರಿ ಗ್ರಾಮದಲ್ಲಿ ನಡೆದಿದೆ.ಸೇವಾಲಾಲ ಭವನ ನಿರ್ಮಾಣ ವಿಚಾರವಾಗಿ ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೇರಿ ಕಟ್ಟಿಗೆ, ದೊಣ್ಣೆ ಹಿಡಿದುಕೊಂಡು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಒಂದು ಗುಂಪಿನ ಗಾಯಾಳುಗಳಿಗೆ ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿತ್ತು. ಈ ವಿಷಯ ತಿಳಿದ ಇನ್ನೊಂದು ಗುಂಪು ಆಸ್ಪತ್ರೆಗೇ ಬಂದು ಮತ್ತೆ ಕ್ಯಾತೆ ತೆಗೆದಿದ್ದಾರೆ.ಮತ್ತೊಂದು ಗುಂಪಿನ ಗಾಯಾಳುಗಳನ್ನು ಬಾಗಲಕೋಟೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಬಸವನ ಬಾಗೇವಾಡಿ ಡಿಎಸ್‍ಪಿ ಮಹೇಶ್ವರಗೌಡ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಘಟನೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಡಿ.ಆರ್ ವ್ಯಾನ್ ನಿಯೋಜನೆ ಮಾಡಲಾಗಿದೆ.ಬಸವನ ಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


