ಬೆಂಗಳೂರು: ಹಲವು ಚುನವಣೋತ್ತರ ಸಮೀಕ್ಷೆಗಳು ಎನ್‍ಡಿಎ ಮೈತ್ರಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಹೇಳಿದರೆ ನ್ಯೂಸ್ ಎಕ್ಸ್ ಈ ಬಾರಿ ಅತಂತ್ರ ಲೋಕಸಭೆ ಆಗಲಿದೆ ಎಂದು ಭವಿಷ್ಯ ನುಡಿದಿದೆ.ನ್ಯೂಸ್ ಎಕ್ಸ್ ಸುದ್ದಿ ವಾಹಿನಿ ಎನ್‍ಡಿಎಗೆ ಮೈತ್ರಿ ಕೂಟಕ್ಕೆ 242 ಸ್ಥಾನ ನೀಡಿದರೆ, ಯುಪಿಎಗೆ 164 ಸ್ಥಾನ ಹಾಗೂ ಇತರೆ 136 ಸ್ಥಾನ ಸಿಗಲಿದೆ ಎಂದು ಹೇಳಿದೆ. ಕರ್ನಾಟಕದಲ್ಲಿ ನ್ಯೂಸ್ ಎಕ್ಸ್ ಸಮೀಕ್ಷೆ ಬಿಜೆಪಿಗೆ 17 ಸ್ಥಾನ ನೀಡಿದ್ದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕೂಟ 11 ಸ್ಥಾನಗಳಿಸಲಿದೆ ಎಂದಿದೆ.2014ರ ಚುನಾವಣೆಯಲ್ಲಿ ಎನ್‍ಡಿಎ 334, ಯುಪಿಎ 59, ಇತರರು 150 ಸ್ಥಾನಗಳನ್ನು ಗೆದ್ದಿದ್ದರು. ಕರ್ನಾಟಕದಲ್ಲಿ ಬಿಜೆಪಿ 17, ಕಾಂಗ್ರೆಸ್ 9, ಜೆಡಿಎಸ್ 2 ಸ್ಥಾನಗಳನ್ನು ಗೆದ್ದುಕೊಂಡಿತ್ತು.ಒಟ್ಟು 542 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು ಬಹುಮತಕ್ಕೆ 272 ಸ್ಥಾನಗಳು ಬೇಕು. ತಮಿಳುನಾಡಿನ ವೆಲ್ಲೂರಿನಲ್ಲಿ ಆದಾಯ ತೆರಿಗೆ ದಾಳಿ ವೇಳೆ ಕೋಟಿಗಟ್ಟಲೇ ದುಡ್ಡು ಸಿಕ್ಕಿತ್ತು. ಹೀಗಾಗಿ ಅಲ್ಲಿನ ಚುನಾವಣೆಯನ್ನು ರದ್ದುಗೊಳಿಸಲಾಗಿದೆ.Sign in to your account
Username or Email Address


Password

 Remember Me


