ಮಡಿಕೇರಿ: ವಿದ್ಯುತ್ ಸ್ಪರ್ಶಿಸಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ.ದೊಡ್ಡಪುಲಿಕೋಟು ಗ್ರಾಮದ ಕೆ.ಸುರೇಶ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ತಮ್ಮಯ್ಯ, ಅನಿಲ್ ಹಾಗೂ ಕವಿತಾ ಮೃತ ದುರ್ದೈವಿಗಳು. ಇಂದು ಕಾಫಿ ತೋಟದಲ್ಲಿ ಮರ ಕಡಿಯಲು ಮರಕ್ಕೆ ಅಲ್ಯುಮಿನಿಯಂ ಏಣಿ ಹಾಕಿದ್ದರು. ಮರದ ಮೇಲೆ ವಿದ್ಯುತ್ ತಂತಿ ಹಾದುಹೋಗಿತ್ತು. ಈ ವೇಳೆ ಮರ ಕಡಿಯುತ್ತಿದ್ದಾಗ ವಿದ್ಯುತ್ ತಂತಿಗೆ ಅಲ್ಯುಮಿನಿಯಂ ಏಣಿ ತಗಲಿದೆ.ಇದನ್ನು ನೋಡಿದ ಇನ್ನಿಬ್ಬರು ಕಾರ್ಮಿಕರು ಆತನನ್ನು ಕಾಪಾಡಲು ಹೋಗಿದ್ದಾರೆ. ಈ ವೇಳೆ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು, ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಕವಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಈ ಘಟನೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.Sign in to your account
Username or Email Address


Password

 Remember Me


