ಬೆಂಗಳೂರು: ನಗರ ಹೊರವಲಯದ ನೆಲಮಂಗಲದಲ್ಲಿ ಸೂಕ್ತ ದಾಖಲೆಗಳಿಲ್ಲದ ಅನೇಕ ಕ್ಲಿನಿಕ್ ಹಾಗೂ ಸ್ಕ್ಯಾನಿಂಗ್ ಸೆಂಟರ್ ಗಳು ತಲೆ ಎತ್ತಿವೆ. ಈ ಕುರಿತು ಸೂಕ್ತ ಮಾಹಿತಿ ಪಡೆದಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಯೋಗೀಶ್ ಗೌಡ ಅವರ ನೇತೃತ್ವದ ಅಧಿಕಾರಿಗಳ ತಂಡ ಭರ್ಜರಿ ದಾಳಿ ಮಾಡಿದೆ.ನೆಲಮಂಗಲದಲ್ಲಿರುವ ಅನಧಿಕೃತ ಕ್ಲಿನಿಕ್ ಹಾಗೂ ಸ್ಕ್ಯಾನಿಂಗ್ ಸೆಂಟರ್‍ಗಳ ಮೇಲೆ ಇಂದು ಜಿಲ್ಲಾ ಆರೋಗ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. ತಾಲೂಕು ವೈದ್ಯಾಧಿಕಾರಿ ಹಾಗೂ ಅಧಿಕಾರಿಗಳು ಯೋಗೀಶ್ ಗೌಡ ಅವರಿಗೆ ಸಾಥ್ ನೀಡಿದರು. ಈ ಮೂಲಕ ಕೆಪಿಎಂಇ ಕಾಯ್ದೆ ಉಲ್ಲಂಘನೆ ಮಾಡಿ ನಡೆಸುತ್ತಿದ್ದ ಕ್ಲಿನಿಕ್‍ಗಳಿಗೆ ಬೀಗ ಜಡಿದಿದ್ದಾರೆ.ನೆಲಮಂಗಲದ ಸ್ಮೈಲ್ ಲೈನ್ ದಂತ ಚಿಕಿತ್ಸಾಲಯ ಹಾಗೂ ಯಂಟಗಾನಹಳ್ಳಿ ಜಿ.ಎನ್. ಎಕ್ಸರೇ ಸೆಂಟರ್ ಬೀಗ ಹಾಕಿ ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸೂಕ್ತ ದಾಖಲೆಗಳಿಲ್ಲದ ಕ್ಲಿನಿಕ್‍ಗಳಿಗೆ ನೋಟಿಸ್ ಜಾರಿ ಮಾಡಿ ಶೀಘ್ರದಲ್ಲೇ ಉತ್ತರಿಸುವಂತೆ ಸೂಚನೆ ನೀಡಿದ್ದಾರೆ.Sign in to your account
Username or Email Address


Password

 Remember Me


