ಬೆಂಗಳೂರು: ಸಿಲಿಕಾನ್ ಸಿಟಿಯ ವೈಯಾಲಿಕಾವಲ್‍ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ವೆಂಕಟೇಶ್ ಸ್ಫೋಟದಿಂದ ಸಾವನ್ನಪ್ಪಿದ ವ್ಯಕ್ತಿ. ಸ್ಫೋಟದ ತೀವ್ರತೆಗೆ ವೆಂಕಟೇಶ್ ದೇಹದ ಕತ್ತು ಮತ್ತು ಕೈ ಛಿದ್ರವಾಗಿದೆ. ಸ್ಫೋಟಕ್ಕೆ ಕಾರಣವಾದ ವಸ್ತು ಯಾವುದು ಎಂದು ತಿಳಿದುಬಂದಿಲ್ಲ.ಸ್ಫೋಟದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಹಾಗೂ ಎಫ್‍ಎಸ್‍ಎಲ್ ತಂಡ ಭೇಟಿ ನೀಡಿದೆ. ಅಷ್ಟೇ ಅಲ್ಲದೆ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಭೇಟಿ ನೀಡಿ ಅಕ್ಕಪಕ್ಕದ ಮನೆಗಳ ಶೋಧ ಮಾಡುತ್ತಿದ್ದಾರೆ.ಸಿಲಿಂಡರ್ ಸ್ಫೋಟದಿಂದ ಈ ದುರಂತ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತವಾಗುತ್ತಿದೆ.Sign in to your account
Username or Email Address


Password

 Remember Me


