ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಕೂಟ 18 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ತಿರುಪತಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾತು ಕೊಟ್ಟಿದ್ದೇವೆ. ಅದರಂತೆ ನಮ್ಮ ಮೈತ್ರಿ ಕೂಟ 18 ಸ್ಥಾನ ಗೆಲ್ಲುತ್ತದೆ. ನಮ್ಮ ಈ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.ಇದೇ ವೇಳೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ನಾವು ಕಾಂಗ್ರೆಸ್ ಜೊತೆ ಇದ್ದೇವೆ ಎಲ್ಲರೂ ಫಲಿತಾಂಶ ಬರುವವರೆಗೂ ಕಾಯಬೇಕು ಎಂದು ಹೇಳಿದರು.ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರಿಗಿಂದು 87 ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆ ದೇವೇಗೌಡರು ಕುಟುಂಬ ಸಮೇತ ತಿರುಪತಿಗೆ ತೆರಳಿದ್ದಾರೆ. ದೇವೇಗೌಡರ ಕುಟುಂಬ ಶುಕ್ರವಾರ ಸಂಜೆ ವಿಶೇಷ ವಿಮಾನದಲ್ಲಿ ತಿರುಪತಿಗೆ ತೆರಳಿತ್ತು. ದೇವೇಗೌಡರು, ಚೆನ್ನಮ್ಮ, ಸಿಎಂ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಸೇರಿದಂತೆ 23 ಜನ ಕುಟುಂಬ ಸದಸ್ಯರು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಬೆಳಗ್ಗೆ 5 ಗಂಟೆಗೆ ದೇವೇಗೌಡರು ತಿರುಪತಿ ತಿಮ್ಮಪ್ಪನಿಗೆ ಸುಪ್ರಭಾತ ಸೇವೆ ಸಲ್ಲಿಸಿದರು.ದೇವೇಗೌಡರು ಪ್ರತಿ ಹುಟ್ಟುಹಬ್ಬಕ್ಕೆ ತಿರುಪತಿಗೆ ತೆರಳಿ ಪೂಜೆ ಸಲ್ಲಿಸುತ್ತಾರೆ. ಅದರಲ್ಲೂ ಈ ಬಾರಿ ರಾಜಕೀಯ ಆಗ್ನಿಪರೀಕ್ಷೆ, ಮೊಮ್ಮಕ್ಕಳ ಭವಿಷ್ಯದ ನಿರ್ಧಾರಕ್ಕೆ 5 ದಿನ ಬಾಕಿ ಇರೋದು ವಿಶೇಷವಾಗಿದೆ.Sign in to your account
Username or Email Address


Password

 Remember Me


