ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಸುಮಲತಾ ಅಂಬರೀಶ್ ಅವರು ಶುಭಾಶಯ ಕೋರಿದ್ದಾರೆ.ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ದೇವೇಗೌಡರಿಗೆ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. “ಗೌರವಾನ್ವಿತ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ. ದೇವೇಗೌಡರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು” ಎಂದು ಟ್ವೀಟ್ ಮಾಡಿದ್ದಾರೆ.ಗೌರವಾನ್ವಿತ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ. ದೇವೇಗೌಡರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು????— Sumalatha Ambareesh ???????? ಸುಮಲತಾ ಅಂಬರೀಶ್ (@sumalathaA) May 18, 2019ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಪ್ರಧಾನಿ ಮೋದಿ ಸೇರಿದಂತೆ ಅನೇಕರು ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಚರಾದ ಎಚ್.ಡಿ. ದೇವೇಗೌಡ ಅವರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ರೈತರು, ಗ್ರಾಮ ಭಾರತದ ಬಗೆಗಿನ ಅವರ ಕಾಳಜಿ ಹಾಗೂ ಇಳಿವಯಸ್ಸಿನಲ್ಲಿಯೂ ದಣಿವರಿಯದ ಹೋರಾಟದ ಕೆಚ್ಚು ನನಗೆ ಸದಾ ಪ್ರೇರಣೆ. ಅವರಿಗೆ ಆರೋಗ್ಯ, ಆಯುಷ್ಯವನ್ನು ಹಾರೈಸುತ್ತೇನೆ” ಎಂದು ಸಿದ್ದರಾಮಯ್ಯ ಶುಭ ಕೋರಿದ್ದಾರೆ.ಮಾಜಿ ಪ್ರಧಾನಿ ದೇವೇಗೌಡರು ಇಂದು 87ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ತಿರುಪತಿಗೆ ಹೋಗಿ ದೇವರ ದರ್ಶನ ಮಾಡಿಕೊಂಡು ಬಂದಿದ್ದಾರೆ. ಅಲ್ಲಿಂದ ವಾಪಸ್ಸಾದ ಬಳಿಕ ಮನೆಯಲ್ಲಿ ಸತ್ಯನಾರಾಯಣಸ್ವಾಮಿ ಪೂಜೆಯನ್ನು ಮಾಡಿಸಿದ್ದಾರೆ.ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ @H_D_Devegowda ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ರೈತರು ಮತ್ತು ಗ್ರಾಮ ಭಾರತದ ಬಗೆಗಿನ ಅವರ ಕಾಳಜಿ ಹಾಗೂ ಇಳಿವಯಸ್ಸಿನಲ್ಲಿಯೂ ದಣಿವರಿಯದ ಹೋರಾಟದ ಕೆಚ್ಚು ನನಗೆ ಸದಾ ಪ್ರೇರಣೆ. ಅವರಿಗೆ ಆರೋಗ್ಯ ಮತ್ತು ಆಯುಷ್ಯವನ್ನು ಹಾರೈಸುತ್ತೇನೆ. pic.twitter.com/aCky4Vty2X— Siddaramaiah (@siddaramaiah) May 18, 2019Sign in to your account
Username or Email Address


Password

 Remember Me


