ಬಳ್ಳಾರಿ: ಸಿಎಂ ಕುರ್ಚಿ ಖಾಲಿಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಇನ್ನು ಮುಂದೆ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಮಾತನಾಡಬಾರದು. ಆ ರೀತಿಯಲ್ಲಿ ಮಾತನಾಡಿದರೆ ಮುಂದಿನ ಅನಾಹುತಕ್ಕೆ ವಿಶ್ವನಾಥ್ ಕಾರಣರಾಗುತ್ತಾರೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಎಚ್ಚರಿಕೆ ನೀಡಿದ್ದಾರೆ.ಬಳ್ಳಾರಿ ರಾಯಚೂರು ಕೊಪ್ಪಳ ಹಾಲೂ ಒಕ್ಕೂಟದ ನಿರ್ದೇಶಕರಾಗಿ ಶಾಸಕ ಭೀಮಾನಾಯ್ಕ್ ಆಯ್ಕೆಯಾಗಿದ್ದು, ಪ್ರಮಾಣಪತ್ರ ಸ್ವೀಕರಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರದಲ್ಲಿ ಏನೂ ಬದಲಾವಣೆ ಆಗಲ್ಲ. ನಾನು ಕಾಂಗ್ರೆಸ್ ಪಕ್ಷದ ಚಿಹ್ನೆಯಡಿಯಲ್ಲಿ ಗೆಲುವು ಸಾಧಿಸಿದ್ದೇನೆ. ಹೀಗಾಗಿ ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ವಿಚಾರದ ಬಗ್ಗೆ ಶಾಸಕರ ಅಭಿಪ್ರಾಯ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಭೀಮಾನಾಯ್ಕ್, ಮುಂದಿನ ಚುನಾವಣೆಯ ನಂತರ ಸಿದ್ದರಾಮಯ್ಯ ಸಿಎಂ ಆಗಬೇಕು ಅನ್ನೋದು ನಮ್ಮೆಲ್ಲರ ಬಯಕೆಯಾಗಿದೆ. ಆದರೆ ಜೆಡಿಎಸ್‍ರ ರಾಜಾಧ್ಯಕ್ಷ ವಿಶ್ವನಾಥ್ ಪದೇ ಪದೇ ಸಿದ್ದರಾಮಯ್ಯ ವಿರುದ್ಧ ಮಾತನಾಡಬಾರದು. ಇದು ಒಳ್ಳೆಯ ಬೆಳವಣಿಗೆಯಲ್ಲ, ವಿಶ್ವನಾಥ್ ಹೇಳಿಕೆಯಿಂದ ಮೈತ್ರಿ ಧರ್ಮಕ್ಕೆ ಧಕ್ಕೆ ಆಗುವ ಲಕ್ಷಣಗಳು ಇವೆ ಎಂದು ಎಚ್ಚರಿಕೆ ನೀಡಿದ್ದಾರೆ.Sign in to your account
Username or Email Address


Password

 Remember Me


