ವಿಜಯಪುರ: ಜೆಡಿಎಸ್‍ನ ಮಾಜಿ ಜಿಲ್ಲಾಧ್ಯಕ್ಷೆ ಹಾಗೂ ಹಾಲಿ ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೇಕನೂರ ಶವ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕೋಲ್ಹಾರ ಬಳಿಯ ಕೃಷ್ಣಾ ನದಿಯಲ್ಲಿ ಪತ್ತೆಯಾಗಿದೆ.ಕಳೆದ ರಾತ್ರಿ ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಕಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗುರುವಾರ ರಾತ್ರಿ ನೆರೆಯ ಮಹಾರಾಷ್ಟ್ರದ ಎಂಐಎಂ ಮುಖಂಡನೊಬ್ಬನೊಂದಿಗೆ ಕಾರ್ ನಲ್ಲಿ ತೆರಳಿದ್ದರು ಎಂದು ಶಂಕಿಸಲಾಗಿದೆ.ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ನಿಂದ ದೇವರಹಿಪ್ಪರಗಿ ಮತಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅಲ್ಲದೆ 2013ರಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್ ನಿಂದ ರೇಷ್ಮಾ ಪಡೇಕನೂರ ಸ್ಪರ್ಧಿಸಿ ಸೋಲು ಕಂಡಿದ್ದರು.ಕೋಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.






 Advertisement 




Sign in to your account
Username or Email Address


Password

 Remember Me


