ಬೆಂಗಳೂರು: ಸಿಎಂ ಸ್ಥಾನಕ್ಕೆ ಲೋಕೋಪಯೋಗಿ ಸಚಿವ ರೇವಣ್ಣ ಅವರು ಕೂಡ ಅರ್ಹ ವ್ಯಕ್ತಿ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್‍ಗೆ ರೇವಣ್ಣ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಹೌದು ರೇವಣ್ಣ ಅವರು ಕೂಡ ಸಿಎಂ ಅಗಲು ಅರ್ಹ ವ್ಯಕ್ತಿ ಎಂದು ಸಿದ್ದರಾಮಯ್ಯ ಮಾಡಿದ್ದ ಟ್ವೀಟ್‍ನ್ನು “ಪ್ರಜ್ವಲ್ ರೇವಣ್ಣ” ಎಂಬ ಹೆಸರಿನ ಫೇಸ್‍ಬುಕ್ ಪೇಜ್‍ನಲ್ಲಿ ಶೇರ್ ಮಾಡಲಾಗಿದ್ದು. ಮೂಂದೊಂದು ದಿನ ರೇವಣ್ಣ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಬರೆಯಲಾಗಿದೆ.https://www.youtube.com/watch?v=sIMoy1_ayzsಈ ಪೋಸ್ಟ್‍ಗೆ ಕುಮಾರಸ್ವಾಮಿ ಅಭಿಮಾನಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು ಜೆಡಿಎಸ್ ಪಕ್ಷವನ್ನು ಒಡೆಯಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ನಿಂಬೆಹಣ್ಣು ರೇವಣ್ಣ ಸಿಎಂ ಆಗಲ್ಲ, ಜೆಡಿಸ್‍ನಿಂದ ಹೆಚ್‍ಡಿಕೆ ಮಾತ್ರ ಸಿಎಂ ರೇವಣ್ಣ ಸಿಎಂ ಆಗಲು ಚಾನ್ಸೆ ಇಲ್ಲ ಎಂದು ರೇವಣ್ಣ ಅಭಿಮಾನಿಗಳನ್ನು ಸಿಎಂ ಅಭಿಮಾನಿಗಳು ಕಿಚಾಯಿಸಿದ್ದಾರೆ.ಆದರೆ ಇನ್ನೂ ಕೆಲವರು ರೇವಣ್ಣ ಮತ್ತು ಕುಮಾರಸ್ವಾಮಿ ಅವರ ಮಧ್ಯೆ ಸಿದ್ದರಾಮಯ್ಯ ತಂದಿಡುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆಲ್ಲ ಜೆಡಿಎಸ್ ಕಾರ್ಯಕರ್ತರು ಬಲಿಯಾಗಬಾರದು ಎಂದು ಕೆಲ ಅಭಿಮಾನಿಗಳು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ.ಮಲ್ಲಿಕಾರ್ಜುನ‌ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ,ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ‌ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು.ಎಲ್ಲಕ್ಕೂ ಕಾಲ‌ ಕೂಡಿ ಬರಬೇಕು.— Siddaramaiah (@siddaramaiah) May 16, 2019ಸಿದ್ದರಾಮಯ್ಯ ಹೇಳಿದ್ದೇನು?
ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು. ಎಂದು ಟ್ವೀಟ್ ಮಾಡಿದ್ದರು.Sign in to your account
Username or Email Address


Password

 Remember Me


