ಮೈಸೂರು: ಹಿರಿಯ ಸಾಹಿತಿ ಪ್ರೊ. ಕೆ.ಎಸ್.ಭಗವಾನ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಪ್ರೊ. ಕೆ.ಎಸ್.ಭಗವಾನ್ ಅವರು ಇಂದು ಸಂಜೆ ವಾಕಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಹಾಗೂ ಆಪ್ತರು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ.ಮೈಸೂರಿನ ಕುವೆಂಪು ನಗರದಲ್ಲಿ ವಾಸವಿರುವ ಪ್ರೊ. ಕೆ.ಎಸ್. ಭಗವಾನ್ ಅವರು ಒಬ್ಬ ವಿಮರ್ಶಕ, ಅನುವಾದಕ ಹಾಗೂ ಚಿಂತಕರಾಗಿದ್ದು ಮೈಸೂರಿನ ಮಹಾರಾಜ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿದ್ದರು. ಸರಳ ಮದುವೆ ಚಳವಳಿಯಲ್ಲಿ ನೂರಾರು ವಿವಾಹಗಳನ್ನು ನೆರವೇರಿಸಿದ್ದಾರೆ.ಭಗವಾನ್ ಹಿಂದೂ ಧರ್ಮವನ್ನು, ಹಿಂದೂ ಧರ್ಮ ದೇವತೆಗಳನ್ನು, ಪುರಾಣಗಳನ್ನು, ಭಗವದ್ಗೀತೆಯನ್ನು, ಪೂಜಾಸ್ಥಳಗಳನ್ನು ಕಟುವಾಗಿ ಟೀಕಿಸಿ ಅನೇಕ ಬಾರಿ ವಿವಾದಕ್ಕೆ ಗುರಿಯಾಗಿದ್ದಾರೆ. “ಶ್ರೀರಾಮ ತಂದೆಗೆ ಹುಟ್ಟಿದ ಮಗನಲ್ಲ” ಎಂದು ಪ್ರೊ.ಭಗವಾನ್ ಅವರು ಹೇಳಿಕೆ ನೀಡಿ ಹಿಂದೂಗಳ ಕೋಪಕ್ಕೆ ಗುರಿಯಾಗಿದ್ದರು.Sign in to your account
Username or Email Address


Password

 Remember Me


