ಹಾಸನ: ಮಾಜಿ ಸಿಎಂ ಸಿದ್ದರಾಮಯ್ಯರಿಗೆ ನನ್ನ ಮೇಲೆ ಅಭಿಮಾನವಿದೆ ಮತ್ತು ಒಲವಿದೆ, ಹೀಗಾಗಿ ಸಿಎಂ ಸ್ಥಾನಕ್ಕೆ ನಾನೂ ಕೂಡ ಅರ್ಹ ಅಂತ ಟ್ವೀಟ್ ಮಾಡಿದ್ದಾರೆ ಎಂದು ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.ಈಗ ಸಿಎಂ ಸ್ಥಾನ ಖಾಲಿ ಇಲ್ಲ. ಸಿಎಂ ಸ್ಥಾನಕ್ಕಾಗಿ ನಾವು ಅಣ್ಣ ತಮ್ಮಂದಿರು ಬಡಿದಾಡಿಕೊಳ್ಳಲ್ಲ. ನಮ್ಮ ವರಿಷ್ಠರು ದೇವೇಗೌಡರು ಏನು ಹೇಳುತ್ತಾರೆ ಹಾಗೆಯೇ ನಾನು ಕೇಳುತ್ತೇನಿ. ಭಿನ್ನವಾಡುವ ಪ್ರಶ್ನೆಯೇ ಉದ್ಭವಿಸಲ್ಲ. ನನ್ನ ಮತ್ತು ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸಿದ್ದರಾಮಯ್ಯನವರಿಗೆ ನನ್ನ ಮೇಲೆ ಅಭಿಮಾನವಿದೆ ಅದಕ್ಕೆ ಸಿಎಂ ಸ್ಥಾನಕ್ಕೆ ಅರ್ಹ ಎಂದಿದ್ದಾರೆ ಎಂದು ಮಾಜಿ ಸಿಎಂ ಪರ ನಿಂತಿದ್ದಾರೆ. ಇದನ್ನೂ ಓದಿ:ಖರ್ಗೆಗೆ ಸಿಎಂ ಪೋಸ್ಟ್ – ಸಿದ್ದರಾಮಯ್ಯ ಟಾಂಗಿಗೆ ಸಿಎಂ ತಿರುಗೇಟುಸಿದ್ದರಾಮಯ್ಯ ಹೇಳಿದ್ದೇನು?
ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದರು.ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ.ಮಲ್ಲಿಕಾರ್ಜುನ‌ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ,ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ‌ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು.ಎಲ್ಲಕ್ಕೂ ಕಾಲ‌ ಕೂಡಿ ಬರಬೇಕು.— Siddaramaiah (@siddaramaiah) May 16, 2019Sign in to your account
Username or Email Address


Password

 Remember Me


