ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಪರೀಕ್ಷೆಯ ಹಾಲ್ ಟಿಕೆಟ್ ನೀಡದಿದ್ದಕ್ಕೆ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಕುಮಾರ್ ನಾಯಕ್ (21) ನೇಣಿಗೆ ಶರಣಾದ ವಿದ್ಯಾರ್ಥಿ. ಇಲ್ಲಿನ ಲೋಯೋಲಾ ಪದವಿ ಕಾಲೇಜಿನ ಬಿಕಾಂ ಎರಡನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದನು. ಮಾನ್ವಿ ಪಟ್ಟಣದ ಅಂಬೇಡ್ಕರ್ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿ ಬುಧವರ ರಾತ್ರಿ ವೇಳೆ ವಸತಿ ನಿಲಯದ ಪಕ್ಕದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಹಾಜರಾತಿ ಕಡಿಮೆ ಇರುವ ಕಾರಣ ಕಳೆದ ವರ್ಷವೂ ಸಹ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಈ ವರ್ಷವೂ ಹಾಲ್ ಟಿಕೆಟ್ ನೀಡದಿದ್ದಕ್ಕೆ ಮನನೊಂದು ಸಾವಿಗೆ ಶರಣಾಗಿದ್ದಾನೆ ಅಂತ ಮೃತ ವಿದ್ಯಾರ್ಥಿ ಪೋಷಕರು ಆರೋಪಿಸಿದ್ದಾರೆ. ಪೋಷಕರು ಸ್ವತಃ ಪ್ರಾಂಶುಪಾಲರ ಬಳಿ ಮನವಿ ಮಾಡಿದ್ದರೂ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿರಲಿಲ್ಲ ಎಂದು ತಿಳಿದು ಬಂದಿದೆ.ಈ ಬಗ್ಗೆ ಮಾಹಿತಿ ತಿಳಿದು ಮಾನ್ವಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಮಾಲ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.Sign in to your account
Username or Email Address


Password

 Remember Me


