ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಶಕ್ತಿ ಇದ್ದರೆ ತಮ್ಮ ಶಾಸಕರನ್ನ ಹಿಡಿದಿಟ್ಟಿಕೊಳ್ಳಲಿ. ನೀವು ಬಲಹೀನರು, ನಿಮ್ಮ ಶಾಸಕರು ಎಲ್ಲಿದ್ದಾರೆ? ಅವರಿಗೆ ಸಮಾಧಾನಪಡಿಸುವ ಕೆಲಸ ನಿಮ್ಮದು. ಕೆಲಸ ಮಾಡಲು ಸಾಧ್ಯವಾಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಅದಕ್ಕಾಗಿ ದೇವರಾಜ ಅರಸು ಅವರನ್ನ ಹೋಲಿಸಿಕೊಳ್ಳುತ್ತಿದ್ದಾರೆ. ಅರಸು ಅವರನ್ನ ಹೋಲಿಸಿಕೊಳ್ಳುವ ನೈತಿಕತೆ ಸಿದ್ದರಾಮಯ್ಯ ಅವರಿಗಿಲ್ಲ. ಅವರ ಶಾಸಕರನ್ನು ಹಿಡೆದಿಟ್ಟುಕೊಳ್ಳಲು ಆಗಲ್ಲ, ಕೆಲಸ ಮಾಡಲು ಆಗಲ್ಲ ಅಂದರೆ ಕೈಗೆ ಬಳೆ ತೊಟ್ಟುಕೊಳ್ಳಲಿ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಕೈಲಾಗದವರು ಮೈ ಪರಚಿಕೊಂಡರು ಎನ್ನುವ ಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರಿದ್ದಾರೆ. ಅವರ ಪಕ್ಷದ ಸಾಧನೆ ಬಗ್ಗೆ ಹೇಳಲಿ, ಅದನ್ನು ಬಿಟ್ಟು ಸಿದ್ದರಾಮಯ್ಯ ಅವರು ಬಾಯಿ ಬಿಟ್ಟರೆ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಮಾತನಾಡುತ್ತಾರೆ ಎಂದು ಹರಿಹಾಯ್ದರು.ಯಡಿಯೂರಪ್ಪನವರು ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ನಾವು ಸಿಎಂ ಆಗ್ತೀವಿ ಎಂದು ಸಿದ್ದರಾಮಯ್ಯ ಮತ್ತು ಸಚಿವ ಡಿಕೆ ಶಿವಕುಮಾರ್ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಕ್ಕಾಗಿ ಅವರ ಶಾಸಕರನ್ನ ಬಡಿದೆಬ್ಬಿಸುತ್ತಿದ್ದಾರೆ. ಕಮಿಷನ್ ಹೊಡೆದ ದುಡ್ಡಿನ ಚೀಲವನ್ನ ತಗೊಂಡು ಹೋಗುತ್ತಾರೆ ಎಂದು ಕಾಂಗ್ರೆಸ್ ಡಿಕೆ ಶಿವಕುಮಾರ್ ಗೆ ಚುನಾವಣೆ ಉಸ್ತುವಾರಿ ನೀಡಿದ್ದಾರೆ. ಅಲ್ಲದೇ ಪ್ಯಾಕೇಜ್‍ಗೆ ಡೀಲ್ ಆಗುವ ದರಿದ್ರ ಜಾಧವ್ ಕುಟುಂಬಕ್ಕೆ ಬಂದಿಲ್ಲ. ಸೋಲಿನ ಭೀತಿಯಿಂದ ಸಮ್ಮಿಶ್ರ ಸರ್ಕಾರದ ನಾಯಕರು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.Sign in to your account
Username or Email Address


Password

 Remember Me


