ಶಿವಮೊಗ್ಗ: ರಸ್ತೆ ಬದಿಗಳಲ್ಲಿ ಹಣ್ಣಿನ ಗಾಡಿ ಹಾಕಿಕೊಂಡ ವ್ಯಾಪಾರಿಗಳು ಹಾಗೂ ಪೊಲೀಸರು ನಡುವೆ ನಡೆದ ಬೀದಿಕಾಳಗಕ್ಕೆ ಸಾವಿರಾರು ರೂ.ಗಳ ಹಣ್ಣುಗಳು ಮಣ್ಣುಪಾಲಾಗಿದೆ.ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ. ರಸ್ತೆ ಬದಿಗಳಲ್ಲಿ ಹಣ್ಣಿನ ಗಾಡಿ ಹಾಕಿದ್ದಕ್ಕೆ ಅದನ್ನು ತೆರವುಗೊಳಿಸಲು ಸಂಚಾರಿ ಪೊಲೀಸರು ಮುಂದಾಗಿದ್ದರು. ಈ ವೇಳೆ ಪೊಲೀಸರು ಮತ್ತು ಹಣ್ಣು ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ ನಡೆದು, ಗಲಾಟೆಯಾಗಿದೆ. ಆದರೆ ಪೊಲೀಸರು ಹಾಗೂ ವ್ಯಾಪಾರಿಗಳ ನೂಕಾಟ ತಳ್ಳಾಟದಲ್ಲಿ ಹಣ್ಣುಗಳು ಮಣ್ಣುಪಾಲಾಗಿದ್ದು, ವ್ಯಾಪಾರಿಗಳು ಪೊಲೀಸರ ನಡೆಯನ್ನು ಖಂಡಿಸಿದ್ದಾರೆ.ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಹಣ್ಣುಗಳು ವ್ಯರ್ಥವಾಯ್ತಲ್ಲ ಎಂದು ವ್ಯಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ಅಮೀರ್ ಅಹ್ಮದ್ ವೃತ್ತದಲ್ಲಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುವಂತಾಯಿತು.ಮಾತಿನ ಚಕಮಕಿಯಿಂದ ಶುರುವಾದ ಗಲಾಟೆ ಪ್ರತಿಭಟನೆ ನಡೆಸುವ ಮಟ್ಟಿಗೆ ಬಂದಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸಿದ ದೊಡ್ಡಪೇಟೆ ಪೊಲೀಸರು ಗಲಾಟೆಯನ್ನು ನಿಯಂತ್ರಿಸಿದರು.Sign in to your account
Username or Email Address


Password

 Remember Me


