ಬೆಂಗಳೂರು: ‘ನಿಖಿಲ್ ಎಲ್ಲಿದ್ದೀಯಪ್ಪಾ’ ಟೈಟಲ್ ನಲ್ಲಿ ಸಿನಿಮಾ ಮಾಡುತ್ತೇನೆ ಎಂಬ ನಿಖಿಲ್ ಹೇಳಿಕೆಯ ಬೆನ್ನಲ್ಲೇ ಅಭಿಮಾನಿಗಳು ಮತ್ತು ಬೆಂಬಲಿಗರು ಖುಷಿಯಾಗಿದ್ದು, ಇದೀಗ ಸಿನಿಮಾದ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಸಪ್ತಗಿರಿ ಕ್ರಿಯೇಷನ್ಸ್, ಕೃಷ್ಣೇಗೌಡ ನಿರ್ಮಾಪಕ, ಅಶೋಕ್ ಕೆ. ಕಡಬ ನಿರ್ದೇಶನ ಎಂದು ಪೋಸ್ಟರ್ ರಿಲೀಸ್ ಮಾಡಲಾಗಿದೆ. ಅದರಲ್ಲಿ ಇಂಡಿಯಾ ಗೇಟ್ ಬಳಿ ನಿಖಿಲ್ ಕುಮಾರಸ್ವಾಮಿ ನಡೆದು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಸಂಸತ್ತಿನ ಪೋಟೋ ಹಾಕಿ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ.ಈ ಮೂಲಕ ನಿಖಿಲ್ ಕುಮಾರಸ್ವಾಮಿ ಅವರು ಇಂಡಿಯಾ ಗೇಟ್‍ನಿಂದ ಸಂಸತ್ತಿಗೆ ಹೋಗುತ್ತಿದ್ದಾರೆ ಎಂಬಂತೆ ಬಿಂಬಿಸಿ ಸಿನಿಮಾ ಪೋಸ್ಟರ್ ತಯಾರು ಮಾಡಿದ್ದಾರೆ. ಇದೀಗ ಈ ಪೋಸ್ಟರ್ ಸಾಮಾಜಿಕ ಜಾಲತಾಣಗಲ್ಲಿ ಹರಿದಾಡುತ್ತಿದೆ.ಈಗಾಗಲೇ ‘ನಿಖಿಲ್ ಎಲ್ಲಿದ್ದೀಯಪ್ಪಾ?’, ‘ಜೋಡೆತ್ತು’ ಹಾಗೂ ‘ಕಳ್ಳೆತ್ತು’ ಟೈಟಲ್‍ಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಣಿಯಾಗಿವೆ. `ಎಲ್ಲಿದ್ದೀಯಪ್ಪಾ?’ ಟೈಟಲ್ ನಿರ್ಮಾಪಕ ಎ.ಗಣೇಶ್ ಅವರ ಪಾಲಾಗಿದೆ. ಅವರು ಶ್ರೀಚಾಮುಂಡೇಶ್ವರಿ ಫಿಲಂಸ್ ಬ್ಯಾನರ್ ಅಡಿ ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲದೆ ನಿರ್ಮಾಪಕ ವಿಜಯ್ ಕುಮಾರ್ ಅವರು `ಕಳ್ಳೆತ್ತು’ ಟೈಟಲ್‍ಗೆ ನೋಂದಣಿ ಮಾಡಿಸಿದ್ದರು.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ಇತ್ತೀಚೆಗಷ್ಟೇ ನಡೆದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ್ದ ನಿಖಿಲ್ ಕುಮಾರಸ್ವಾಮಿ ಅವರು, `ನಿಖಿಲ್ ಎಲ್ಲಿದ್ದೀಯಪ್ಪಾ?’ ಸಿನಿಮಾಗೆ ನಾನೇ ಹೀರೋ, ಸಚಿವ ಸಿ.ಎಸ್.ಪುಟ್ಟರಾಜು ಅವರೇ ಪ್ರೊಡ್ಯೂಸರ್. ಈ ಟೈಟಲ್ ಅನ್ನು ಯಾರಿಗೂ ಕೊಡದಂತೆ ಚಿತ್ರಮಂಡಳಿಗೆ ಮನವಿ ಮಾಡಿಕೊಂಡಿದ್ದೇನೆ ಎಂದು ಹೇಳಿದ್ದರು.Sign in to your account
Username or Email Address


Password

 Remember Me


