ಬೆಂಗಳೂರು: ‘ಬಿಗ್‍ಬಾಸ್ ಸೀಸನ್ 6’ರ ಗಾಯಕ ಮತ್ತು ಸಂಗೀತ ನಿರ್ದೇಶಕ ನವೀನ್ ಸಜ್ಜು ಇದೀಗ ನಾಯಕ ನಟನಾಗಿ ತೆರೆ ಮೇಲೆ ಮಿಂಚಲು ಸಿದ್ಧರಾಗುತ್ತಿದ್ದಾರೆ.ಗಾಯಕ ನವೀನ್ ಸಜ್ಜು ಅವರಿಗೆ ನಾಟನಾಗಬೇಕೆಂಬ ಆಸೆ ಇತ್ತು. ಇದೀಗ ಅವರ ಆಸೆ ಈಡೇರುತ್ತಿದ್ದು, ಇವರ ಮೊದಲ ಸಿನಿಮಾಗೆ ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದ ನಿರ್ದೇಶಕ ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.ಈ ಸಿನಿಮಾಗೆ ‘ಚಾರ್ಲಿ ಚಾಪ್ಲಿನ್’ ಎಂದು ಹೆಸರಿಟ್ಟಿದ್ದಾರೆ. ಇದೊಂದು ಹಾಸ್ಯ ಪ್ರಧಾನ ಸಿನಿಮಾವಾಗಿರುವುದರಿಂದ ಈ ಟೈಟಲ್ ಫಿಕ್ಸ್ ಮಾಡಲಾಗಿದೆ. ಬೆಂಗಳೂರಿನಿಂದ ಮಡಿಕೇರಿಗೆ ಹೋಗುವ ಒಂದು ತಂಡಕ್ಕೆ ಅಲ್ಲಿ ಏನೆಲ್ಲ ಆಗುತ್ತದೆ ಎಂಬುವುದನ್ನು ಈ ಸಿನಿಮಾದ ಮೂಲಕ ಹೇಳಲಾಗುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.ಸಿನಿಮಾದಲ್ಲಿ ನವೀನ್ ಸಜ್ಜುಗೆ ನಾಯಕಿಯಾಗಿ ಸಂಜನಾ ಆನಂದ್ ಕಾಣಿಸಿಕೊಳ್ಳಲ್ಲಿದ್ದಾರೆ. ಸದ್ಯಕ್ಕೆ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದ್ದು, ಜುಲೈನಲ್ಲಿ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ.Sign in to your account
Username or Email Address


Password

 Remember Me


