ಚಿಕ್ಕಬಳ್ಳಾಪುರ: ಬೃಹತ್ ಗಾತ್ರದ ಗ್ರಾನೈಟ್ ಕಲ್ಲು ದಿಮ್ಮೆ ಹೊತ್ತು ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ರ ಮಂಚನಬಲೆ ಗ್ರಾಮದ ಸೇತುವೆ ಬಳಿ ನಡೆದಿದೆ.ಮೃತ ವ್ಯಕ್ತಿ ಗುಡಿಬಂಡೆ ತಾಲೂಕು ಮದ್ದರೆಡ್ಡಿಹಳ್ಳಿಯ ನಿವಾಸಿ ನಾಗೇಶ್ ಎಂದು ತಿಳಿದುಬಂದಿದೆ. ಇವರು ಬಿಎಂಟಿಸಿ ನೌಕರರಾಗಿದ್ದು, ಕರ್ತವ್ಯಕ್ಕೆ ಹಾಜರಾಗಲು ಸ್ವಗ್ರಾಮದಿಂದ ಬೆಂಗಳೂರಿಗೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ಅಪಘಾತದ ರಭಸಕ್ಕೆ ಬೈಕ್ ಲಾರಿಯ ಹಿಂಬದಿಯ ಚಕ್ರದಲ್ಲೇ ಸಿಲುಕಿ ಹಾಕಿಕೊಂಡಿದ್ದು, ನಾಗೇಶ್ ನಡುರಸ್ತೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಲಾರಿಯ ಹಿಂಬದಿಯಲ್ಲಿ ಯಾವುದೇ ಇಂಡಿಕೇಟರ್ ಗಳು ಇಲ್ಲದೆ ಕತ್ತಲಲ್ಲೇ ಸಾಗುತ್ತಿದ್ದುದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಅಪಘಾತದ ನಂತರ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಚಿಕ್ಕಬಳ್ಳಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


