ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿರುವ ಸಂಸದೆ ಶೋಭಾ ಕರಂದ್ಲಾಜೆ ಅವರು ಲಂಬಾಣಿ ಡ್ರೆಸ್‍ನಲ್ಲಿ ಫುಲ್ ಮಿಂಚಿದ್ದಾರೆ.ಚಿಂಚೋಳಿ ತಾಲೂಕಿನ ಚಿಂದಾನೂರ ತಾಂಡದಲ್ಲಿ ಇಂದು ಶೋಭಾ ಕರಂದ್ಲಾಜೆ ಪ್ರಚಾರ ಮಾಡಿದರು. ಈ ವೇಳೆ ಲಂಬಾಣಿ ಉಡುಗೆ ತೊಟ್ಟು, ತಾಂಡಾದ ಜನರ ಜೊತೆಗೆ ಹೆಜ್ಜೆ ಹಾಕುತ್ತ ಮತಯಾಚಿದರು. ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಭಾರತಿ ಅವರು ಸಾಥ್ ನೀಡಿದರು.ಈ ವೇಳೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಮೊದಲ ಬಾರಿಗೆ ಲಂಬಾಣಿ ನಿಗಮ ಸ್ಥಾಪನೆ ಮಾಡಿತ್ತು. ಉಮೇಶ್ ಜಾಧವ್ ಅವರು ಬಿಜೆಪಿ ಸೇರಿದ ಮೇಲೆ ಪಕ್ಷಕ್ಕೆ ಆನೆ ಬಲ ಬಂದಿದೆ. ಉಪ ಚುನಾವಣೆಯಲ್ಲಿ ನಾವು ಕುಂದಗೋಳ ಹಾಗೂ ಚಿಂಚೋಳಿಯಲ್ಲಿ ಗೆಲುವು ಸಾಧಿಸುತ್ತೇವೆ. ಈ ಮೂಲಕ ನಮ್ಮ ಶಾಸಕರ ಬಲ 106ಕ್ಕೆ ಏರಿಕೆಯಾಗಲಿದೆ. ಕಾಂಗ್ರೆಸ್ ಕುಸಿದು ಹೋಗುತ್ತಿದೆ ಎಂದು ಹೇಳಿದರು.ಪ್ರಧಾನಿ ನರೇಂದ್ರ ಮೋದಿ ವಿಜಯ್ ಚೌಕ್‍ನಲ್ಲಿ ನೇಣು ಹಾಕಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಹತಾಶೆಗೆ ಒಳಗಾಗಿರುವ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಯವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಹೀಗಾಗಿ ಕೂಡಲೇ ಮಲ್ಲಿಕಾರ್ಜುನ ಖರ್ಗೆಯವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.Sign in to your account
Username or Email Address


Password

 Remember Me


