ಮಂಗಳೂರು: ಅನುಚಿತ ವರ್ತನೆ ತೋರಿದ ದೈವ ಪಾತ್ರಿಯೋರ್ವರ ಕೂದಲನ್ನು ಭಕ್ತರು ಬಲವಂತವಾಗಿ ಕತ್ತರಿಸಿ, ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ನಡೆದಿದೆ.ದೈವ ಪಾತ್ರಿ ಲೋಕೇಶ್ ಪೂಜಾರಿ ಅವರ ಮೇಲೆ ಈ ದೌರ್ಜನ್ಯ ನಡೆದಿದ್ದು, ದೈವದ ನರ್ತನ ಸೇವೆ ನಡೆದ ಬಳಿಕ ಕೆಲವರು ಸೇರಿ ಈ ಹಲ್ಲೆ ನಡೆಸಿದ್ದಾರೆ. ದೈವ ಪಾತ್ರಿ ಲೊಕೇಶ್ ಅವರಿಗೆ ಜನರ ಗುಂಪೊಂದು ಪ್ರಶ್ನಿಸಿದ್ದು, ಕೈಯಲ್ಲಿನ ಖಡಗ ತೆಗೆಯುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ ಬಲವಂತವಾಗಿ ಪಾತ್ರಿಯ ತಲೆ ಕೂದಲನ್ನು ಕತ್ತರಿಸಿದ್ದಾರೆ. ಈ ನಡುವೆ ಹಿರಿಯರು ತಡೆಯಲು ಯತ್ನಿಸಿದರೂ ಯುವಕರ ಗುಂಪು ಲೋಕೇಶ್ ಮೇಲೆ ಹಲ್ಲೆ ನಡೆಸಿದೆ.ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ದೈವ ಪಾತ್ರಿಗೆ ಅವಮಾನ ಮಾಡಿರೋ ಬಗ್ಗೆ ವಿರೋಧ ಕೇಳಿಬಂದಿದೆ. ಆದರೆ ಕೃತ್ಯ ಎಸಗಿದವರು ತಮ್ಮ ಕೆಲಸವನ್ನು ಸಮರ್ಥಿಸಿಕೊಂಡಿದ್ದಾರೆ.ಲೋಕೇಶ್ ಪೂಜಾರಿ ವೃತ್ತಿಯಲ್ಲಿ ದೈವದ ಪಾತ್ರಿಯಾಗಿದ್ದರೂ, ಸಲಿಂಗ ಕಾಮ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಯುವಕರು ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ದೈವದ ಪಾತ್ರಿಗಳು ಇಂಥ ವರ್ತನೆ ತೋರಿದರೆ ಹೇಗೆ ಎನ್ನುವ ಆಕ್ರೋಶದಿಂದ ಯುವಕರು ಈ ರೀತಿ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.Sign in to your account
Username or Email Address


Password

 Remember Me


