ವಿಜಯಪುರ: ಈಶಾನ್ಯ ಸಾರಿಗೆ ಬಸ್ಸೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬಳಗಾನೂರ ಬಳಿ ನಡೆದಿದೆ.ಈಶಾನ್ಯ ಸಾರಿಗೆ ಬಸ್ ಬಳಗಾನೂರನಿಂದ ಸಿಂದಗಿ ಹೊರಟ್ಟಿತ್ತು. ಆದರೆ ಬಸ್ ಬಳಗಾನೂರದಿಂದ ಸ್ವಲ್ಪ ದೂರ ಚಲಿಸಿದ್ದು, ಅಷ್ಟರಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ತಕ್ಷಣ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಬಸ್ ಕಿಟಕಿ ಮತ್ತು ಡ್ರೈವರ್ ಬಳಿ ಇರುವ ಬಾಗಿಲ ಮೂಲಕ ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.ಈ ಅವಘಡದಿಂದ ಬಸ್ಸಿನಲ್ಲಿದ್ದ 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.Sign in to your account
Username or Email Address


Password

 Remember Me


