ಹಾಸನ: ಆಟೋ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತವಾದ ಪರಿಣಾಮ ಪುಟ್ಟ ಮಗು ಸೇರಿ ಮೂವರ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಲಕ್ಷ್ಮಮ್ಮ (55), ಚಂದ್ರಕಲಾ (32) ಮತ್ತು ಚಂದ್ರಕಲಾ ಜೊತೆಯಲ್ಲಿದ್ದ ಮೂರು ತಿಂಗಳ ಹಸುಗೂಸು ಮೃತ ದುರ್ದೈವಿಗಳು. ಇನ್ನೂ ಈ ಅಪಘಾತದಲ್ಲಿ ನಾಲ್ವರಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಕೆಎಸ್‌ಆರ್‌ಟಿಸಿ ಬಸ್ ಹಾಸನದಿಂದ ಬೇಲೂರು ಕಡೆಗೆ ಹೋಗುತ್ತಿತ್ತು. ಇತ್ತ ರಂಗನಕೊಪ್ಪಲು ಗ್ರಾಮದಿಂದ ಅಂದಲೆ ಗ್ರಾಮಕ್ಕೆ ಆಟೋ ಬರುತ್ತಿತ್ತು. ಆದರೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಂದಲೆ ಗ್ರಾಮದ ಬಳಿ ಆಟೋ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿದೆ ಪರಿಣಾಮ ಆಟೋದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.ಈ ಘಟನೆಯ ಬಗ್ಗೆ ಮಾಹಿತಿ ತಿಳಿದು ಹಳೆಬೀಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.Sign in to your account
Username or Email Address


Password

 Remember Me


