ಕೋಲಾರ: ಸಾಮಾನ್ಯವಾಗಿ ಅಭಿಮಾನಿಗಳು ನೆಚ್ಚಿನ ನಟ-ನಟಿಯರು ಇಲ್ಲವಾದಲ್ಲಿ ರಾಜಕೀಯ ನಾಯಕರು, ಒಳ್ಳೆಯ ಪ್ರವಾಸಿ ಸ್ಥಳಗಳಲ್ಲಿ ಸೆಲ್ಫಿ ತೆಗೆದುಕೊಳ್ಳುವುದು ಕಾಮನ್. ಆದರೆ ಕೋಲಾರದಲ್ಲಿ ತಮ್ಮ ನೆಚ್ಚಿನ ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ಮಹಿಳಾ ಪೊಲೀಸ್ ಪೇದೆಗಳು ಸೆಲ್ಫಿಗಾಗಿ ಮುಗಿಬಿದ್ದ ಪ್ರಸಂಗವೊಂದು ವೈರಲ್ ಆಗಿದೆ.ಕೋಲಾರ ಎಸ್‍ಪಿ ರೋಹಿಣಿ ಕಟೋಜ್ ಅವರೊಂದಿಗೆ ತಮ್ಮ ಕೈ ಕೆಳಗೆ ಕೆಲಸ ಮಾಡುವ ಮಹಿಳಾ ಪೊಲೀಸ್ ಸಿಬ್ಬಂದಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಮೂಲಕ ಖುಷಿ ಪಟ್ಟಿದ್ದಾರೆ. ತಮ್ಮ ನೆಚ್ಚಿನ ಅಧಿಕಾರಿಯಾಗಿರುವ ಎಸ್‍ಪಿ ಮೇಡಂ ಜೊತೆಗೆ 30ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿ ನಗರದ ಕವಾಯತು ಮೈದಾನದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.ತಮ್ಮ ಕೆಳಗೆ ಕೆಲಸ ಮಾಡುವ ಮಹಿಳಾ ಸಿಬ್ಬಂದಿ ಸೆಲ್ಫಿ ತೆಗೆದುಕೊಂಡಿದ್ದಕ್ಕೆ ಎಸ್‍ಪಿ ರೋಹಿಣಿ ಕಟೋಜ್ ಖುಷಿಯಾಗಿ ಪೋಸ್ ಕೊಟ್ಟಿದ್ದಾರೆ. ಅಲ್ಲದೆ ಮತ್ತೊಮ್ಮ ಗ್ರೂಪ್ ಫೋಟೋ ತೆಗೆಸಿಕೊಳ್ಳುವ ಇಂಗಿತ ಕೂಡ ವ್ಯಕ್ತಪಡಿಸಿದ್ದಾರೆ.Sign in to your account
Username or Email Address


Password

 Remember Me


