ಮಂಡ್ಯ: ಸಾಲಬಾಧೆ ತಾಳಲಾರದೇ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಮೆಳ್ಳಹಳ್ಳಿ ಗ್ರಾಮದಲ್ಲಿ ನಡೆದಿದೆ.ನಾಗರಾಜು(28) ಮತ್ತು ಮಂಜುಳ(24) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೂರು ವರ್ಷಗಳ ಹಿಂದೆ ನಾಗರಾಜು ಮತ್ತು ಮಂಜುಳ ಮದುವೆಯಾಗಿತ್ತು. ಈ ದಂಪತಿಗೆ ಒಂದು ಗಂಡು ಮಗು ಕೂಡ ಇದೆ. ಆದರೆ ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ.ದಂಪತಿಗೆ ಸುಮಾರು 1.5 ಲಕ್ಷ ರೂ. ಸಾಲ ಇತ್ತು ಎಂದು ತಿಳಿದು ಬಂದಿದೆ. ಹೀಗಾಗಿ ಸಾಲಗಾರರ ಕಿರುಕುಳದಿಂದ ಬೇಸತ್ತು ನಾಗರಾಜು ಮತ್ತು ಮಂಜುಳ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Sign in to your account
Username or Email Address


Password

 Remember Me


