ಹಾಸನ: ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ಪ್ರಿನ್ಸಿಪಲ್ ತನ್ನ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ ಘಟನೆ ಹಾಸನದಲ್ಲಿ ನಡೆದಿದೆ.ಚನ್ನರಾಯಪಟ್ಟಣ ಪಟ್ಟಣದ ಕ್ರೈಸ್ಟ್ ಪಿಯು ಕಾಲೇಜ್ ಪ್ರಿನ್ಸಿಪಲ್ ಆಂಟೋನಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ.ಕ್ರೈಸ್ಟ್ ಕಾಲೇಜಿನಿಂದ ಪ್ರತಿ ವರ್ಷ ವಿದ್ಯಾರ್ಥಿಗಳು ಪ್ರವಾಸ ಹೋಗುತ್ತಾರೆ. ಹಾಗೆಯೇ ಮೂರು ತಿಂಗಳ ಹಿಂದೆ ತನ್ನ ಕಾಲೇಜಿನ ವಿದ್ಯಾರ್ಥಿಗಳ ಜೊತೆ ಆಂಟೋನಿ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಆಂಟೋನಿ ವಿದ್ಯಾರ್ಥಿನಿಯರ ಜೊತೆ ಡ್ಯಾನ್ಸ್ ಮಾಡುತ್ತಾ ಅವರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ.ಗೋವಾಗೆ ಹೋಗಿ ಹಿಂತಿರುಗುತ್ತಿದ್ದಾಗ ಆಂಟೋನಿ ವಿದ್ಯಾರ್ಥಿನಿಯರ ಜೊತೆ ಡ್ಯಾನ್ಸ್ ಮಾಡಿದ್ದಾರೆ. ಅಲ್ಲದೆ ಬಸ್ಸಿನಲ್ಲಿ ವಿದ್ಯಾರ್ಥಿನಿಯೊಬ್ಬಳ ತೊಡೆ ಮೇಲೆ ಮಲಗಿರುವ ಫೋಟೋ ಹಾಗೂ ವಿಡಿಯೋಗಳು ಮೂರು ತಿಂಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಈ ವಿಡಿಯೋ ನೋಡಿದ ಜನರು ಮಕ್ಕಳಿಗೆ ಮಾರ್ಗದರ್ಶನ ನೀಡುವ ಶಿಕ್ಷಕರೇ ಈ ರೀತಿ ವರ್ತಿಸುತ್ತಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆಯನ್ನು ಕೇಳುತ್ತಿದ್ದಾರೆ.Sign in to your account
Username or Email Address


Password

 Remember Me


