ಮಡಿಕೇರಿ: ಇದೇ ಅ.17ರಂದು ತಲಕಾವೇರಿಯಲ್ಲಿ ಜರುಗುವ ಪವಿತ್ರ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು (N S Bosaraju) ಅವರು ಸೂಚಿಸಿದ್ದಾರೆ. ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪವಿತ್ರ ತೀರ್ಥೋದ್ಭವ ಸಂಬಂಧ ತಲಕಾವೇರಿಯಲ್ಲಿ ಭಕ್ತಾಧಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಅಧಿಕಾರಿಗಳು ಗಮನಹರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಈ ಬಾರಿ ಅ.17ರಂದು ಬೆಳಗ್ಗೆ 7:40 ಗಂಟೆಗೆ ಪವಿತ್ರ ತೀರ್ಥೋದ್ಭವ ಸಂಭವಿಸುವುದರಿಂದ ರಾತ್ರಿ ವೇಳೆಯಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ಮಳೆ ಕಡಿಮೆಯಾಗಿದ್ದು, ಕೂಡಲೇ ರಸ್ತೆ ನಿರ್ವಹಣೆ ಕೈಗೊಳ್ಳಬೇಕು. ರಸ್ತೆ ಬದಿ ಕಾಡನ್ನು ಕಡಿಯಬೇಕು. ಗಿಡ ಗಂಟೆ ಸಂಬಂಧ ಅರಣ್ಯ ಅಧಿಕಾರಿಗಳು ತಗಾದೆ ತೆಗೆಯಬಾರದು ಎಂದು ನಿರ್ದೇಶನ ನೀಡಿದ್ದಾರೆ.ಇದನ್ನೂ ಓದಿ: ಹೀರೋ ಆದ ‘ಶ್ರೀಗೌರಿ’ ಸೀರಿಯಲ್ ವಿಲನ್- ‘ಪೀಟರ್’ ಚಿತ್ರಕ್ಕೆ ಡಾಲಿ, ವಿಜಯ್ ಸೇತುಪತಿ ಸಾಥ್ಪೊಲೀಸ್ ಇಲಾಖೆ ಅಧಿಕಾರಿಗಳು ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಬಂದೋಬಸ್ತ್ ಮಾಡಬೇಕು. ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಬಸ್ ಸೌಲಭ್ಯ ಒದಗಿಸುವುದು, ಕಾವೇರಿ ನೀರಾವರಿ ನಿಗಮ, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಹಂತದಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದರು.ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಎ.ಎಸ್.ಪೊನ್ನಣ್ಣ ಅವರು ಮಾತನಾಡಿ, ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ಸೂಚಿಸಿದರು. ನಾಡಿನ ಜೀವನದಿ ತಲಕಾವೇರಿಯ ಪವಿತ್ರ ತೀರ್ಥೋದ್ಭವ ಒಂದು ವಿಶಿಷ್ಟವಾಗಿದ್ದು, ಪವಿತ್ರ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಭಕ್ತಾಧಿಗಳಿಗೆ ಅಗತ್ಯ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು.ಮಡಿಕೇರಿ-ಭಾಗಮಂಡಲ, ಕರಿಕೆ-ಭಾಗಮಂಡಲ, ವಿರಾಜಪೇಟೆ-ಭಾಗಮಂಡಲ ರಸ್ತೆಗುಂಡಿ ಮುಚ್ಚಬೇಕು. ರಸ್ತೆ ನಿರ್ವಹಣೆ ಮಾಡಬೇಕು. ಹಾಗೆಯೇ ಭಾಗಮಂಡಲ-ತಲಕಾವೇರಿ ರಸ್ತೆ ಸರಿಪಡಿಸುವಂತೆ ನಿರ್ದೇಶನ ನೀಡಿದರು. ತಲಕಾವೇರಿ ತೀರ್ಥೋದ್ಭವಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದು, ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ತಾತ್ಕಾಲಿಕ ಶೌಚಾಲಯ, ಕುಡಿಯುವ ನೀರು ಮತ್ತಿತರ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು.ಇದನ್ನೂ ಓದಿ: ಸೋಮವಾರ ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ: ಅಶ್ವಥ್ ನಾರಾಯಣ್ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ರಸ್ತೆ ಗಿಡಗಂಟೆ ಕಡಿಯುವ ಸಂಬಂಧ ಲೋಕೋಪಯೋಗಿ, ಅರಣ್ಯ ಮತ್ತು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ಮಾಡಿ ತುರ್ತು ಕ್ರಮವಹಿಸುವಂತೆ ಸೂಚಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ, ಪ್ರತೀ ಬಾರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗುತ್ತದೆ. ಇದನ್ನು ನಿಯಂತ್ರಿಸಲು ಭಕ್ತಾಧಿಗಳು ಸಹಕರಿಸಬೇಕು ಎಂದು ಕೋರಿದರು. ಈ ಬಾರಿ ಬೆಳಗಿನ ವೇಳೆ ತೀರ್ಥೋದ್ಭವ ಸಂಭವಿಸುವುದರಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆ ಆಗಮಿಸಲಿದ್ದಾರೆ. ಆದ್ದರಿಂದ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗುವುದು ಎಂದರು. ಕೆಎಸ್‌ಆರ್‌ಟಿಸಿ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿ ತೀರ್ಥೋದ್ಭವಕ್ಕೆ ಅಗತ್ಯ ಬಸ್ ಸೌಲಭ್ಯವನ್ನು ಕಳೆದ ಬಾರಿಯಂತೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.Sign in to your account
Username or Email Address


Password

 Remember Me


