– ಸರ್ಕಾರಿ ಹಾಸ್ಟೆಲ್‍ನಲ್ಲಿ ಅವ್ಯವಸ್ಥೆ
– ಟೀ ಮಾಡಲು 65 ವಿದ್ಯಾರ್ಥಿಗಳಿಗೆ 1.ಲೀ ಹಾಲುಮೈಸೂರು: ಹೆಚ್.ಡಿ.ಕೋಟೆ (H.D Kote) ಪಟ್ಟಣದಲ್ಲಿರುವ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ (Kasturba Gandhi hostel) ಸರಿಯಾಗಿ ಊಟ ನಿಡುತ್ತಿಲ್ಲ ಎಂದು ವಿದ್ಯಾರ್ಥಿನಿಯರು (Students)  `ಪಬ್ಲಿಕ್ ಟಿವಿ’ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.ಕಳೆದ 15 ದಿನಗಳಿಂದ ವಸತಿ ನಿಲಯದಲ್ಲಿ ಸರಿಯಾದ ಊಟ ನೀಡುತ್ತಿಲ್ಲ. ವಸತಿ ನಿಲಯದಲ್ಲಿ ಆಹಾರ ಪದಾರ್ಥಗಳಿಲ್ಲದೆ ನಮಗೆ ಹೊಟ್ಟೆ ತುಂಬ ಊಟ ಸಿಗುತ್ತಿಲ್ಲ. ಕಾಫಿ, ಟೀ ಕೂಡ ಸರಿಯಾಗಿ ಸಿಗುತ್ತಿಲ್ಲ. 65 ವಿದ್ಯಾರ್ಥಿನಿಯರಿಗೆ 1 ಲೀಟರ್ ಹಾಲು ನೀಡಲಾಗುತ್ತಿದೆ. ಎಲ್ಲಾ ವಿದ್ಯಾರ್ಥಿನಿಯರ ಊಟಕ್ಕೆ ಕೇವಲ 5.5 ಕೆಜಿ ಸೊಸೈಟಿ ಅಕ್ಕಿ ಕೊಡಲಾಗುತ್ತದೆ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಮೇಲ್ವಿಚಾರಕಿ, ಆಹಾರ ಪದಾರ್ಥ ಪೂರೈಸುವ ಗುತ್ತಿಗೆದಾರರು ಕೊಡುವ ಆಹಾರ ಪದಾರ್ಥದಿಂದಷ್ಟೇ ನಾನು ವಿದ್ಯಾರ್ಥಿನಿಯರಿಗೆ ಆಹಾರ ತಯಾರಿಸಿ ಕೊಡಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಆಹಾರ ಸಾಮಾಗ್ರಿಗಳನ್ನು ಪೂರೈಸುತ್ತಿದ್ದ ಗುತ್ತಿಗೆದಾರ, ಕಡಿಮೆ ದರಕ್ಕೆ ಟೆಂಡರ್ ಪಡೆದುಕೊಂಡಿದ್ದು ಆ ದರದಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಪೂರೈಸಲು ಸಾಧ್ಯವಾಗುತ್ತಿಲ್ಲ. ನಾನು ಪಡೆದುಕೊಂಡಿದ್ದ ಟೆಂಡರ್ ಅವಧಿ ಪೂರ್ಣಗೊಂಡಿದೆ. ನನ್ನ ಟೆಂಡರ್ ರದ್ದುಗೊಳಿಸಲು ಪತ್ರ ಬರೆದಿದ್ದೇನೆ. ನನಗೂ ಹಾಸ್ಟೆಲ್‍ಗೂ ಯಾವ ಸಂಬಂಧ ಇಲ್ಲ ಎಂದಿದ್ದಾರೆ.ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಆಡಳಿತದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಇದಾಗಿದೆ.Sign in to your account
Username or Email Address


Password

 Remember Me


