ಬೆಂಗಳೂರು: ಬೆಳಗಿನ ಜಾವ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.ಮೃತರನ್ನು ರಾಜಾಜಿನಗರದ ಲೋಕೇಶ್, ಬಾಬು, ಮಂಜುನಾಥ್ ಹಾಗೂ ಹರೀಶ್ ಎಂದು ಗುರುತಿಸಲಾಗಿದೆ. ಮೃತರು ಮದುವೆ ಕಾರ್ಯ ನಿಮಿತ್ತ ಶನಿವಾರ ತಡರಾತ್ರಿ ಬೆಂಗಳೂರಿನಿಂದ ಮಧುರೈಗೆ ಕಾರಿನಲ್ಲಿ ಹೊರಟಿದ್ದರು. ಭಾನುವಾರ ಮುಂಜಾನೆ 5ರ ವೇಳೆಯಲ್ಲಿ ದಿಂಡಿಗಲ್ ಜಿಲ್ಲೆಯ ತಾಡಿಕೊಂಬು ಬಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರೂ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ತಾಡಿಕೊಂಬು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictvSign in to your account
Username or Email Address


Password

 Remember Me


