ಹಾಸನ: ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಲೆ ಮಾಡಿದ್ದ ಪತಿಯನ್ನು ಗ್ರಾಮಸ್ಥರು ಲೈಟ್ ಕಂಬಕ್ಕೆ ಕಟ್ಟಿ ಹಾಕಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ಕುರಿಕಾವಲ್ ಗ್ರಾಮದಲ್ಲಿ ಇಂದು ನಡೆದಿದೆ.ಮುನಿಯಮ್ಮ (35) ಕೊಲೆಯಾದ ಮಹಿಳೆ. ಗಂಗಬೋವಿ ಕೊಲೆ ಮಾಡಿರುವ ಆರೋಪಿ. ಶುಕ್ರವಾರ ರಾತ್ರಿ ವೇಳೆ ಗಂಗಬೋವಿ ಮನೆಗೆ ಕುಡಿದು ಬಂದಿದ್ದನು. ಕುಡಿದ ಅಮಲಿನಲ್ಲಿ ತನ್ನ ಪತ್ನಿಯ ಬಳಿ ಜಗಳವಾಡಿ, ದೊಣ್ಣೆಯಿಂದ ತೆಲೆಗೆ ಹೊಡೆದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಈ ಘಟನೆ ಕುರಿತು ಗ್ರಾಮಸ್ಥರಿಗೆ ತಿಳಿಯುತ್ತಿದಂತೆ ಆರೋಪಿಯನ್ನು ಲೈಟ್ ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಅಲ್ಲದೆ ಆರೋಪಿ ಗಂಗಬೋವಿ ವಿರುದ್ಧ  ಪೊಲೀಸ್ ಠಾಣೆಯಲ್ಲಿ ಕುರುಕಾವಲ್ ಗ್ರಾಮಸ್ಥರು ದೂರು ದಾಖಲಿಸಿದ್ದಾರೆ.ಗ್ರಾಮಸ್ಥರ ದೂರಿನ ಆಧಾರದ ಮೇರೆಗೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv Sign in to your account
Username or Email Address


Password

 Remember Me


