ಬಾಗಲಕೋಟೆ: ಜಿಲ್ಲೆಯ ಎಸ್‍ಪಿ ನಿವಾಸಕ್ಕೆ ಭದ್ರತಾ ಸಿಬ್ಬಂದಿ ಆಗಿದ್ದ ಪೊಲೀಸ್ ಪೇದೆಯೊಬ್ಬರು ಅವರ ಮನೆ ಎದುರೇ ತೆಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಂಜುನಾಥ್ ಹರಿಜನ(28) ಆತ್ಮಹತ್ಯೆಗೆ ಶರಣಾದ ಪೇದೆ. ಮಂಜುನಾಥ್ ಅವರು ಮೂಲತಃ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಿಟ್ಟಲಕೋಡ ಗ್ರಾಮದ ನಿವಾಸಿ. ಕಳೆದ ಒಂದೂವರೆ ವರ್ಷದಿಂದ ಬಾಗಲಕೋಟೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬಾಗಲಕೋಟೆಯ ಎಸ್‍ಪಿ ಸಿ.ಬಿ ರಿಷ್ಯಂತ್ ನಿವಾಸಕ್ಕೆ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಎಸ್‍ಪಿ ಮನೆ ಎದುರೇ ಕರ್ತವ್ಯಕ್ಕೆಂದು ನೀಡಲಾಗಿದ್ದ ರೈಫಲ್ 303ಯಿಂದ ತೆಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಂಜುನಾಥ್ ಹರಿಜನ ಅವರು 2012 ರಂದು ಪೊಲೀಸ್ ಇಲಾಖೆಗೆ ಪೇದೆಯಾಗಿ ನೇಮಕವಾಗಿದ್ದರು. ಮಂಜುನಾಥ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ಪೇದೆ ಆತ್ಮಹತ್ಯೆ ಹಿನ್ನೆಲೆ ಪೊಲೀಸರು ಶ್ವಾನದಳದೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶಿಲನೆ ನಡೆಸುತ್ತಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


