ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಿಯತಮೆ ಎದುರೇ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನಲ್ಲಿ ನಡೆದಿದೆ.ರೋಷನ್(23) ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ. ರೋಷನ್ ಮೂಲತಃ ಹೈದರಾಬಾದ್ ನಿವಾಸಿಯಾಗಿದ್ದು, ಎಚ್‍ಎಸ್‍ಆರ್ ಲೇಔಟ್‍ನ ಐಟಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ರೋಷನ್ ಅದೇ ಕಂಪನಿಯ ಮುಸ್ಲಿಂ ಯುವತಿಯನ್ನು ಪ್ರೀತಿಸುತಿದ್ದ.ರೋಷನ್ ಪದೇ ಪದೇ ಪ್ರೀತಿಸು ಎಂದು ಯುವತಿಗೆ ಪೀಡಿಸುತ್ತಿದ್ದನು. ಆದರೆ ಯುವತಿ ರೋಷನ್ ಪ್ರೀತಿಯನ್ನು ನಿರಾಕರಿಸಿದ್ದಳು. ಆಗ ರೋಷನ್ ಯುವತಿಗೆ ಪೀಡಿಸಲು ಶುರು ಮಾಡಿದ್ದನು. ರೋಷನ್ ಕಾಟ ತಾಳಲಾರದೇ ಯುವತಿ ಕೆಲಸ ಬಿಟ್ಟಿದ್ದಳು.ಯುವತಿ ಕೆಲಸ ಬಿಟ್ಟು ಅದೇ ಬಿಲ್ಡಿಂಗ್‍ನ ಮೂರನೇ ಮಹಡಿಯ ಬೇರೆ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದಳು. ಆದರೆ ರೋಷನ್ ಐದನೇ ಮಹಡಿಯಿಂದ ಮೂರನೇ ಮಹಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೋಷನ್ ಆತ್ಮಹತ್ಯೆ ಮಾಡಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸದ್ಯ ಈ ಬಗ್ಗೆ ಎಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


