ಬೆಂಗಳೂರು: ನಗರ ಪೊಲೀಸ್ ಆಯುಕ್ತ ಕಚೇರಿ ಕೂಗಳತೆ ದೂರದಲ್ಲೇ ಗಂಧದ ಮರಗಳ ಕಳ್ಳತನ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಇನ್‍ಫ್ಯಾಂಟ್ರಿ ರಸ್ತೆಯಲ್ಲಿರುವ ಕಮೀಷನರ್ ಕಚೇರಿ ಪಕ್ಕದಲ್ಲೇ ಇರುವ ಎಂಬೆಸ್ಸಿ ಅಪಾಟ್ರ್ಮೆಂಟ್‍ನಲ್ಲಿ ಗಂಧದ ಮರವನ್ನು ಕಳ್ಳರು ಕದ್ದೊಯ್ದಿದ್ದಾರೆ. ಇದೇ ತಿಂಗಳ 21 ರಂದು ಘಟನೆ ನಡೆದಿದ್ದು, ಈ ವೇಳೆ ಮಚ್ಚು ದೊಣ್ಣೆಗಳಿಂದ ಭದ್ರತಾ ಸಿಬ್ಬಂದಿಯನ್ನು ಬೆದರಿಸಿರುವ ಕಳ್ಳರು ಗಂಧದ ಮರವನ್ನು ಕಳ್ಳತನ ಮಾಡಿದ್ದಾರೆ.ಬೆಳಗಿನ ಜಾವ ಸುಮಾರು 3.55 ಸಮಯದಲ್ಲಿ ಮುಖಕ್ಕೆ ಮಂಕಿ ಕ್ಯಾಪ್ ಧರಿಸಿ ಬಂದ ನಾಲ್ಕು ಕಳ್ಳರು ಅಪಾರ್ಟ್‍ಮೆಂಟ್ ಕಾಂಪೌಂಡ್ ಜಿಗಿದು ಒಳಪ್ರವೇಶ ಮಾಡಿದ್ದಾರೆ. ಅಲ್ಲದೇ ಈ ವೇಳೆ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿಗಳಿಗೆ ಮಾರಕಾಸ್ತ್ರಗಳಿಂದ ಬೆದರಿಕೆ ಹಾಕಿ ಸ್ಥಳದಲ್ಲಿದ್ದ ಶ್ರೀಗಂಧ ಮರವನ್ನು ಯಂತ್ರದಿಂದ ತುಂಡರಿಸಿ ಕಳವು ಮಾಡಿದ್ದಾರೆ.ಘಟನೆ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


