ರಾಯಚೂರು: ಶವ ಸಂಸ್ಕಾರಕ್ಕೆಂದು ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟು 26 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಿಂಧನೂರಿನ ಕನ್ನಾರಿ ಬಳಿ ನಡೆದಿದೆ.ಲಕ್ಕಮ್ಮ ವಿರೂಪಾಪುರ (65) ಹಾಗೂ ಬಸವರಾಜ ಸುಕಾಲಪೇಟೆ (60) ಮೃತ ದುರ್ದೈವಿಗಳು. ಮೃತರನ್ನೊಳಗೊಂಡಂತೆ 30 ಜನರ ತಂಡ ಶವ ಸಂಸ್ಕಾರಕ್ಕೆಂದು ವಿರೂಪಾಪುರದಿಂದ ದಢೇಸೂಗುರಿಗೆ ಟ್ರ್ಯಾಕ್ಟರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಸಿಂಧನೂರಿನ ಕನ್ನಾರಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ.ಪಲ್ಟಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, 26 ಮಂದಿ ಗಾಯಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictvSign in to your account
Username or Email Address


Password

 Remember Me


