ಬೆಳಗಾವಿ (ಚಿಕ್ಕೋಡಿ): ದೈಹಿಕ ಮತ್ತು ಮಾನಸಿಕ ಕಿರುಕುಳ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ ನಡೆದಿದೆ.ಪ್ರತೀಕ್ಷಾ ಸುನೀಲ್ ಖೋತ (20) ನೇಣಿಗೆ ಶರಣಾದ ಗೃಹಿಣಿ. ಪ್ರತೀಕ್ಷಾಗೆ ಗಂಡ ಹಾಗೂ ಅತ್ತೆ ಮಾವ ಸೇರಿ ಚಿತ್ರಹಿಂಸೆ ನೀಡುತ್ತಿದ್ದರು. ಹೀಗಾಗಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಬೇಸತ್ತಿದ್ದ ಪ್ರತೀಕ್ಷಾ, ಗಂಡನ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಂಡತಿ ಮೃತಪಟ್ಟ ನಂತರ ಪತಿ ಸುನೀಲ್ ಪರಾರಿಯಾಗಿದ್ದಾನೆ.ಈ ಕುರಿತು ಪ್ರತೀಕ್ಷಾ ತಂದೆ ಯಲ್ಲಪ್ಪ ಉಪ್ಪಾರ ಅಥಣಿ ಪೊಲೀಸ್‌ ಠಾಣೆಯಲ್ಲಿ ಸುನೀಲ್ ಹಾಗೂ ಅವನ ಕುಟುಂಬದವರ ವಿರುದ್ಧ ದೂರು ನೀಡಿದ್ದಾರೆ. ದೂರಿನನ್ವಯ ಪ್ರತೀಕ್ಷಾ ಅತ್ತೆ ಮಾವನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪರಾರಿಯಾಗಿರುವ ಗಂಡ ಸುನೀಲ್‍ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಘಟನೆ ಕುರಿತು ಅಥಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictvSign in to your account
Username or Email Address


Password

 Remember Me


