ಬೆಂಗಳೂರು: ಪ್ರೀತಿಸಿದವಳು ಕೈಕೊಟ್ಟಳು ಅಂತಾ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೆಬ್ಬಗೋಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕೇರಳ ಹಿಡಚಿ ಮೂಲದ ಅಭಿಲಾಷ್ (32) ಆತ್ಮಹತ್ಯೆಗೆ ಶರಣಾದ ಯುವಕ. ಆನೇಕಲ್ ತಾಲೂಕಿನ ಹೆಬ್ಬಗೋಡಿಯ ನಳಂದ ಹೊಟೇಲ್‍ನಲ್ಲಿ ಅಭಿಲಾಷ್ ಇಂದು ನೇಣು ಹಾಕಿಕೊಂಡು ಪ್ರಾಣ ಬಿಟ್ಟಿದ್ದಾನೆ.ಅಭಿಲಾಷ್ ಹಾಗೂ ಯುವತಿ ಕೇರಳದಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತ ಯುವತಿ ಉದ್ಯೋಗ ಹುಡುಕಿಕೊಂಡು ಬೆಂಗಳೂರಿನ ಬೊಮ್ಮಸಂದ್ರಕ್ಕೆ ಬಂದು ವಾಸವಾಗಿದ್ದಳು. ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದಳು. ವೃತ್ತಿಯಲ್ಲಿ ಚಾಲಕನಾಗಿದ್ದ ಅಭಿಲಾಷ್ ಹಿಡಚಿಯಲ್ಲಿಯೇ ಕೆಲಸ ಮಾಡುತ್ತಿದ್ದ. ಇಬ್ಬರೂ ಫೋನ್ ಮೂಲಕ ಸಂಪರ್ಕದಲ್ಲಿದ್ದರು.ಕೆಲ ದಿನಗಳ ನಂತರ ಯುವತಿ ಅಭಿಷೇಕ್ ಜೊತೆಗೆ ಫೋನ್‍ನಲ್ಲಿ ಮಾತನಾಡುವುದು ಹಾಗೂ ಮೆಸೇಜ್ ಮಾಡುವುದನ್ನು ಕಡಿಮೆ ಮಾಡಿದ್ದಾಳೆ. ಆಕೆಯ ವರ್ತನೆಯಿಂದ ಅನುಮಾನ ವ್ಯಕ್ತಪಡಿಸಿದ ಅಭಿಷೇಕ್ ಬೆಂಗಳೂರಿಗೆ ಬಂದಿದ್ದ. ಆದರೆ ಯುವತಿ ತನ್ನ ನಿರ್ಧಾರ ಬದಲಿಸಿದ್ದಾಗಿ, ನಿನ್ನನ್ನು ಪ್ರೀತಿಸುವುದಿಲ್ಲ ಎಂದು ಹೇಳಿದ್ದಾಳೆ. ಆಕೆಯ ಹೇಳಿಕೆಯಿಂದ ಮನನೊಂದ ಅಭಿಷೇಕ್ ತಾನು ವಾಸವಿದ್ದ ಹೆಬ್ಬಗೋಡಿಯ ನಳಂದ ಹೊಟೇಲ್‍ಗೆ ವಾಪಾಸ್ ಮರಳಿದ್ದಾನೆ. ಬಳಿಕ ಫ್ಯಾನ್‍ಗೆ ಬ್ಲ್ಯಾಂಕೇಟ್ ಕಟ್ಟಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನೇಣು ಬಿಗಿದ ಸ್ಥಿತಿಯಲ್ಲಿದ್ದ ಅಭಿಷೇಕ್ ಶವವನ್ನು ನೋಡಿದ ಹೊಟೇಲ್ ಮಾಲೀಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹೆಬ್ಬಗೋಡಿ ಠಾಣೆ ಪೊಲಿಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


