ಮಂಗಳೂರು: ಪಾರ್ಕಿಗೆ ಬಂದ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಸೋಮವಾರ ಸಂಜೆ ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ನಡೆದಿದೆ.ಅಮೃತ್ ಕುಮಾರ್(22) ಹಾಗೂ ಹರ್ಷಿತಾ(20) ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು. ಅಮೃತ್ ಹಾಗೂ ಹರ್ಷಿತಾ ಇಬ್ಬರು ಕಾಸರಗೋಡು ಮೂಲದವರು ಎಂದು ಹೇಳಲಾಗುತ್ತಿದೆ. ಈ ಪ್ರೇಮಿಗಳು ಆತ್ಮಹತ್ಯೆಗೆ ಯಾಕೆ ಯತ್ನಿಸಿದ್ದಾರೆ ಎಂಬುದರ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ.ಅಮೃತ್ ಹಾಗೂ ಹರ್ಷಿತಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಪಾರ್ಕಿನಲ್ಲಿ ಕೆಲ ಸಮಯ ಕಳೆದಿದ್ದಾರೆ. ಬಳಿಕ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಿಬ್ಬರು ವಿಷ ಸೇವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಿದ್ದನ್ನು ನೋಡಿದ ಸಾರ್ವಜನಿಕರು ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸದ್ಯ ಅಮೃತ್ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಹರ್ಷಿತಾ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಸದ್ಯ ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictvSign in to your account
Username or Email Address


Password

 Remember Me


