ಬಳ್ಳಾರಿ: ಶಾಲಾ ಮಕ್ಕಳಿಗೆ ಡ್ರಿಲ್ ಮಾಡಿಸುವ ವೇಳೆ ತಪ್ಪು ಮಾಡಿದ ವಿದ್ಯಾರ್ಥಿಗೆ ದೈಹಿಕ ಶಿಕ್ಷಣ ಶಿಕ್ಷಕನೊಬ್ಬ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಶಿಕ್ಷಕನ ಹೊಡೆತಕ್ಕೆ ವಿದ್ಯಾರ್ಥಿಯ ಕೈ ಮುರಿದಿದ್ದು, ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಹೂವಿನಹಡಗಲಿ ತಾಲೂಕಿನ ಇಟಗಿ ಗ್ರಾಮದ ಸರ್ಕಾರಿ ಮೊರಾರ್ಜಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಶನಿವಾರ ಡ್ರಿಲ್ ಮಾಡಿಸುವ ವೇಳೆ ತಪ್ಪು ಮಾಡಿದ್ದಾನೆ. ಹೀಗಾಗಿ ರೊಚ್ಚಿಗೆದ್ದ ಶಿಕ್ಷಕ ಸಂಗಜ್ಜ, ವಿದ್ಯಾರ್ಥಿಗೆ ಕಟ್ಟಿಗೆಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಪರಿಣಾಮ ವಿದ್ಯಾರ್ಥಿಯ ಕೈ ಮುರಿದಿದೆ.ಸದ್ಯ ಬಾಲಕನ ಪೋಷಕರು ಗ್ರಾಮಸ್ಥರು ಹಾಗೂ ಸ್ಥಳೀಯರು ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಂದು ಶಾಲೆಯ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಈ ಮೊರಾರ್ಜಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬರುವ ಸೌಲಭ್ಯಗಳನ್ನು ಸಹ ಶಿಕ್ಷಕರು ಮಕ್ಕಳಿಗೆ ನೀಡದೇ ಅನ್ಯಾಯ ಮಾಡುತ್ತಾರೆ ಎಂದು ಪೋಷಕರು ಪ್ರತಿಭಟನೆ ವೇಳೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ.ಸದ್ಯ ಬಾಲಕನ ಪೋಷಕರು ಪ್ರಕರಣದ ಬಗ್ಗೆ ದೂರು ನೀಡಲು ಚಿಂತಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictvSign in to your account
Username or Email Address


Password

 Remember Me


