ಗದಗ: ಸ್ಟೇರಿಂಗ್ ಕಟ್ಟಾದ ಪರಿಣಾಮ ಶಾಲಾ ಮಕ್ಕಳಿದ್ದ ಶಾಲಾ ಬಸ್ ಪಲ್ಟಿಯಾಗಿರುವ ಘಟನೆ ಗದಗ ತಾಲೂಕಿನ ಕಲ್ಲೂರ ಗ್ರಾಮದ ಬಳಿ ನಡೆದಿದೆ.ಗದಗ ತಾಲೂಕಿನ ಹೊಸಳ್ಳಿಯ ಬೂದಿಶ್ವರ ವಿದ್ಯಾಪೀಠಕ್ಕೆ ಸೇರಿದ ಶಾಲಾ ಬಸ್ ಇದಾಗಿದ್ದು, ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಈ ಅಪಘಡ ಸಂಭವಿಸಿದೆ. ಸದ್ಯಕ್ಕೆ ಬಸ್ ಅಪಘಾತದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಈ ಬಸ್ ಕಲ್ಲೂರು, ಚಿಂಚಲಿ, ಅಂತೂರ, ಬೆಂತೂರ ಗ್ರಾಮದ ಮಕ್ಕಳನ್ನ ಶಾಲೆಗೆ ಕರೆದುಕೊಂಡು ಹೋಗುತ್ತಿತ್ತು. ಎಂದಿನಂತೆ ಇಂದು ಕೂಡ ಬಸ್ ಮೊದಲಿಗೆ ಒಂದು ಗ್ರಾಮದ ಮಕ್ಕಳನ್ನು ಕರೆದುಕೊಂಡು ಇನ್ನೊಂದು ಗ್ರಾಮಕ್ಕೆ ಹೋಗುತ್ತಿತ್ತು. ಈ ವೇಳೆ ಸ್ಟೇರಿಂಗ್ ಕಟ್ಟಾಗಿ ಚಾಲಕನ ಜಾಗರೂಕತೆಯಿಂದ ಕಲ್ಲೂರ ಗ್ರಾಮದ ಬಳಿ ಬಸ್ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿದೆ.ಈ ಅಪಘಾತದಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ. ಬಸ್ಸಿನಲ್ಲಿ 12 ವಿದ್ಯಾರ್ಥಿಗಳು ಇದ್ದರು. ಸದ್ಯಕ್ಕೆ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.ಈ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictvSign in to your account
Username or Email Address


Password

 Remember Me


