ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಖಾಸಗಿ ಬಸ್ ವಿಸಿ ನಾಲೆಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿ 20ಕ್ಕೂ ಜನರು ಸಾವನ್ನಪ್ಪಿದ್ದಾರೆ.ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ನಾಲೆಗೆ ಉರುಳಿದೆ. ಖಾಸಗಿ ಬಸ್ ಪ್ರತಿನಿತ್ಯ ಎರಡು ಬಾರಿ ಸಂಚರಿಸುತ್ತಿತ್ತು. ಬಸ್ ಸಂಪೂರ್ಣ ನೀರಿನಲ್ಲಿ ಮುಳುಗಿದ್ದು, ಈಗಾಗಲೇ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ನಾಲೆಗೆ ಹರಿಸುವ ನೀರನ್ನು ನಿಲ್ಲಿಸಲಾಗಿದೆ. ಓರ್ವ ಬಾಲಕ ಮಾತ್ರ ಬದುಕುಳಿದಿದ್ದಾನಂತೆ ಎಂದು ಸಚಿವ ಪುಟ್ಟರಾಜು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.ಇಂದು ಶನಿವಾರ ಆಗಿದ್ದರಿಂದ ಮಕ್ಕಳು ಶಾಲೆ ಮುಗಿಸಿಕೊಂಡು ಬಸ್ ನಲ್ಲಿ ಮನೆಗೆ ತೆರಳುತ್ತಿದ್ದರು. ಬಸ್ ತಕ್ಷಣವೇ ನಾಲೆಯಲ್ಲಿ ಬೀಳುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಗ್ಗದ ಸಹಾಯದಿಂದ ರಕ್ಷಣೆಗೆ ಮುಂದಾಗಿದ್ದಾರೆ. ಗ್ರಾಮಸ್ಥರು ಇದೂವರೆಗೂ 20ಕ್ಕೂ ಅಧಿಕ ಶವಗಳನ್ನು ಹೊರ ತೆಗೆದಿದ್ದಾರೆ ಎಂಬ ಮಾಹಿತಿಗಳು ಸದ್ಯಕ್ಕೆ ಲಭ್ಯವಾಗುತ್ತಿವೆ. ಆದರೆ ಬಸ್ ನಲ್ಲಿ ಎಷ್ಟು ಜನರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿಲ್ಲ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


