ಧಾರವಾಡ(ಹುಬ್ಬಳ್ಳಿ): ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ನಡೆದಿದೆ.ಹುಬ್ಬಳ್ಳಿ ತಾಲೂಕಿನ ಅಗಡಿ ಕ್ರಾಸ್ ಬಳಿ ಮುಂಜಾನೆ ಈ ಘಟನೆ ನಡೆದಿದೆ. ಬಸವರಾಜ್ ಕಡಪಟ್ಟಿ ಕೊಲೆಯಾದ ಗ್ರಾ.ಪಂ. ಅಧ್ಯಕ್ಷ. ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಬಸವರಾಜ್ ಕಡಪಟ್ಟಿ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ರಾಜಕೀಯ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ.ಗ್ರಾಮ ಪಂಚಾಯಿತಿಯಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಕಾರ್ಯನಿರ್ವಹಿಸಬೇಕು ಎಂಬ ಒಪ್ಪಂದವಾಗಿತ್ತು. ಆದರೆ ಮೃತ ಬಸವರಾಜ್ ಅಧಿಕಾರಾವಧಿ ಎರಡು ವರ್ಷವಾಗಿದ್ದು, ಅಧಿಕಾರದ ಅವಧಿ ಮುಗಿಯುವ ಸಮಯ ಬಂದಿತ್ತು. ಆದರೆ ಬಸವರಾಜ್‍ಗೆ ಅಧಿಕಾರ ಬಿಡಲು ಇಷ್ಟರವಿರಲಿಲ್ಲ. ಆದ್ದರಿಂದ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


