ಮೈಸೂರು: ಇಂದಿಗೆ ಸಮ್ಮಿಶ್ರ ಸರ್ಕಾರ ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ನಾವಿಬ್ಬರು ಮದುವೆಯಾಗಿದ್ದೇವೆ, ಸಂಸಾರ ಚೆನ್ನಾಗಿ ನಡೆಯುತ್ತಿದೆ ಎಂದು ಜೆಡಿಎಸ್ ರಾಜ್ಯಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಜೆಡಿಎಸ್ ರಾಜ್ಯಧ್ಯಕ್ಷ ಎಚ್.ವಿಶ್ವನಾಥ್, ಇಂದು ಸಮ್ಮಿಶ್ರ ಸರ್ಕಾರ ಆರು ತಿಂಗಳನ್ನು ಪೂರೈಸಿದೆ. ಮೈತ್ರಿ ಸರ್ಕಾರ ಚೆನ್ನಾಗಿ ಸಂಸಾರ ಮಾಡುತ್ತಿದೆ. ತೊಂದರೆ ಏನು ಇಲ್ಲ. ನಮ್ಮದೇನು ಬೇರೆ ಬೇರೆ ಕುಟುಂಬವಲ್ಲ, ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ಕುಟುಂಬವಾಗಿದೆ ಎಂದು ತನ್ನ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.ನಾವು ಮದುವೆಯಾಗಿದ್ದೇವೆ. ಕಾಂಗ್ರೆಸ್-ಜೆಡಿಎಸ್ ಒಂದೇ ಕುಟುಂಬ. ಹೀಗಾಗಿ ಸಂಸಾರ ಚೆನ್ನಾಗಿ ನಡೆಯುತ್ತಿದೆ. ಏನು ತೊಂದರೆ ಇಲ್ಲ ಎಂದು ಎಚ್.ವಿಶ್ವನಾಥ್ ಪ್ರತಿಕ್ರಿಯಿಸಿದರು.ಇಂದು ದೋಸ್ತಿ ಸರಕಾರಕ್ಕೆ ಅರ್ಧವಾರ್ಷಿಕ ಸಂಭ್ರಮ. ಯಾಕೆಂದರೆ ಮೈತ್ರಿ ಸರಕಾರ ರಚನೆಯಾಗಿ ಇಂದಿಗೆ ಆರು ತಿಂಗಳನ್ನು ಪೂರೈಸಿದೆ. 2018 ಮೇ 23 ರಂದು ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


