ಬೀದರ್: ಅರಣ್ಯ ಇಲಾಖೆ ಕಚೇರಿ ಮುಂದೆಯೇ ರಾಡ್ ಮತ್ತು ಕಟ್ಟಿಗೆಯಿಂದ ಹೊಡೆದು ಓರ್ವ ಸಿಬ್ಬಂದಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಬೀದರ್ ತಾಲೂಕಿನ ಶಾಪೂರ್ ಸಮೀಪದಲ್ಲಿ ನಡೆದಿದೆ.ಶಾಪೂರ್ ಸಮೀಪ ಅರಣ್ಯ ಇಲಾಖೆಯ ಪ್ರಭು (61) ಕೊಲೆಯಾದ ಸಿಬ್ಬಂದಿ. ದುಷ್ಕರ್ಮಿಗಳು ಇಂದು ಬೆಳಗ್ಗೆ ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಆದರೆ ಕೊಲೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಭು ಅವರು ಈ ಹಿಂದೆ ಪಶು ಇಲಾಖೆಯಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದರು. ಬಳಿಕ ಗುತ್ತಿಗೆ ಆಧಾರದ ಮೇಲೆ ಅರಣ್ಯ ಇಲಾಖೆಯ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳದಲ್ಲಿ ಮೃತ ಪ್ರಭು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಾರ್ಕೆಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಎಸ್‍ಪಿ ಶ್ರೀಧರ್ ಅವರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


